ETV Bharat / state

ಚುನಾವಣೆಗಳಿಗಾಗಿ ಸಾವಿರಾರು ಕೋಟಿ ರೂ. ಹಣ ಅನಗತ್ಯವಾಗಿ ಪೋಲು: ಸ್ಪೀಕರ್ ಕಾಗೇರಿ - Assembly session

ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಚುನಾವಣೆ ನಡೆಯದೇ ಇರುವುದರಿಂದ ಮಿತಿಮೀರಿದ ಭ್ರಷ್ಟಾಚಾರಕ್ಕೆ ದಾರಿಯಾಗಿದೆ ಎಂದು ವಿಧಾನಸಭೆಯಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಚುನಾವಣೆಗಾಗಿ ಸಾವಿರಾರು ಕೋಟಿ ರೂಪಾಯಿ ಹಣ ಅನಗತ್ಯವಾಗಿ ಪೋಲಾಗುತ್ತಿದೆ ಎಂದಿದ್ದಾರೆ.

Vishweshwara Hegde Kageri
ವಿಶ್ವೇಶ್ವರ ಹೆಗಡೆ ಕಾಗೇರಿ
author img

By

Published : Mar 4, 2021, 1:53 PM IST

ಬೆಂಗಳೂರು: ಭಾರತದಲ್ಲಿ ಚುನಾವಣೆಗಳಿಗಾಗಿ ಸಾವಿರಾರು ಕೋಟಿ ರೂ. ಹಣ ಅನಗತ್ಯವಾಗಿ ಪೋಲಾಗುತ್ತಿದ್ದು‌ ಈ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವುದು ಅತ್ಯಗತ್ಯವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಇಂದು ' ಒಂದು ರಾಷ್ಟ್ರ, ಒಂದು ಚುನಾವಣೆ ' ಎಂಬ ಪ್ರಸ್ತಾಪದ ಮೇಲಿನ ಚರ್ಚೆಗೆ ಅವಕಾಶ ಮಾಡಿಕೊಡುವ ಸಂದರ್ಭದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಚುನಾವಣೆ ನಡೆಯದೇ ಇರುವುದರಿಂದ ಮಿತಿಮೀರಿದ ಭ್ರಷ್ಟಾಚಾರಕ್ಕೆ ದಾರಿಯಾಗಿದೆ ಎಂದರು.

ಒಂದು ದೇಶ, ಒಂದು ಚುನಾವಣೆ ಕುರಿತು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತು

ಈಗ ಪ್ರತಿವರ್ಷವೂ ದೇಶದ ಯಾವುದಾದರೂ ರಾಜ್ಯದ ವಿಧಾನಸಭೆಗೆ ಚುನಾವಣೆ ನಡೆಯುತ್ತಲೇ ಇರುತ್ತದೆ. ಆ ಮೂಲಕ ಜನಸೇವೆಯ ಕೆಲಸಕ್ಕಿಂತ ಸಮಸ್ಯೆಯೇ ಹೆಚ್ಚಾಗುತ್ತಿದೆ. 2019 ರಲ್ಲಿ ಲೋಕಸಭೆ ಹಾಗೂ ಮೂರು ರಾಜ್ಯಗಳ‌ ವಿಧಾನಸಭೆಗಳಿಗೆ ಚುನಾವಣೆ ನಡೆಯಿತು. ಇದಕ್ಕಾಗಿ 60 ಸಾವಿರ ಕೋಟಿ ರೂ. ವೆಚ್ಚವಾಯಿತು. ಇದೇ ರೀತಿ ಮೇಲಿಂದ ಮೇಲೆ ಚುನಾವಣೆಗಳು ನಡೆಯುತ್ತಿದ್ದರೆ ರಾಷ್ಟ್ರೀಯ ಮತ್ತು ಪ್ರಾಂತೀಯ ಪಕ್ಷಗಳ ಗಮನ ಚುನಾವಣೆಗಳ‌ ಕಡೆ ಇರುತ್ತದೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೊಡೆತ ಬೀಳುತ್ತಿದೆ. ಹೀಗಾಗಿ ಒಂದು ರಾಷ್ಟ್ರ, ಒಂದು ಚುನಾವಣೆಯ ವಿಷಯದಲ್ಲಿ ಒಮ್ಮತಕ್ಕೆ ಬಂದು ಹಣ, ಸಮಯ ಉಳಿಸುವ ಅಗತ್ಯವಿದೆ. ಹಾಗೆ ಮಾಡಿದಾಗ ಮಾತ್ರವೇ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರಿಗೆ ಒಳ್ಳೆಯ ಸೇವೆ ನೀಡಲು ಸಾಧ್ಯ. ಅಭಿವೃದ್ಧಿಯ ಕಡೆ ಗಮನ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಈ ಮುನ್ನ ಚುನಾವಣೆಗಳಲ್ಲಿ ಮತದಾನ ಮಾಡಲು ಮತಪತ್ರಗಳನ್ನು ಬಳಸಲಾಗುತ್ತಿತ್ತು. ಇದಕ್ಕಾಗಿ ಮಾನವ ಶ್ರಮ ಹೆಚ್ಚು ಬಳಕೆಯಾಗುತ್ತಿತ್ತು. ಹಣಕಾಸಿನ ವೆಚ್ಚವೂ ಹೆಚ್ಚಾಗುತ್ತಿತ್ತು. ಆದರೆ ಈಗ ಮತಯಂತ್ರಗಳ ಬಳಕೆಯಿಂದ ಫಲಿತಾಂಶವನ್ನು ಅರ್ಧ ದಿನದಲ್ಲಿ ಪಡೆಯಲು ಸಾಧ್ಯವಾಗಿದೆ. ವೆಚ್ಚವೂ ಕಡಿಮೆಯಾಗಿದೆ ಎಂದು ಸ್ಪೀಕರ್​ ವಿವರಿಸಿದರು.

ಹೀಗೆ ಕಾಲಮಾನಕ್ಕೆ ಅನುಗುಣವಾಗಿ ನಾವು ಸುಧಾರಿತ ವ್ಯವಸ್ಥೆಯನ್ನು ಅಳವಡಿಸಿಕೊಂಡರೆ ಹೆಚ್ಚು ಒಳ್ಳೆಯದು. ಈ ಹಿನ್ನೆಲೆಯಲ್ಲಿಯೇ ಪ್ರಧಾನಿ ಮೋದಿಯವರು ಒಂದು ರಾಷ್ಟ್ರ, ಒಂದು ಚುನಾವಣೆಯ ಪ್ರಸ್ತಾಪ ಮಾಡಿದ್ದಾರೆ. ಈ ಕುರಿತು ವಿವರವಾಗಿ ಚರ್ಚಿಸೋಣ ಎಂದು ಸದನದ ಸದಸ್ಯರಿಗೆ ಹೇಳಿದರು.

1,200 ರಾಜಕೀಯ ಪಕ್ಷಗಳಿಂದ ಭಾರತದ ರಾಜಕೀಯ ವ್ಯವಸ್ಥೆ ಮುನ್ನಡೆಯುತ್ತಿದೆ. ಏಕಕಾಲದಲ್ಲಿ ಚುನಾವಣೆ ನಡೆಯದೆ ಇರುವುದರಿಂದ ಭ್ರಷ್ಟಾಚಾರಕ್ಕೂ ಹೆಚ್ಚು ಆಸ್ಪದ ಸಿಗುತ್ತಿದೆ. ಇದೇ ಕಾರಣಕ್ಕಾಗಿ ಅಮೆರಿಕ, ಆಸ್ಟ್ರೇಲಿಯಾ, ಬ್ರೆಜಿಲ್ ಸೇರಿದಂತೆ ವಿವಿಧ ದೇಶಗಳಲ್ಲಿ ಏಕಕಾಲಕ್ಕೆ ಚುನಾವಣೆ ನಡೆಯುತ್ತಿವೆ. ಭಾರತದಲ್ಲೂ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಬೆಗಳಿಗೆ ಚುನಾವಣೆ ನಡೆಯುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.