ETV Bharat / state

ಜೆಡಿಎಸ್ ತೊರೆದಿದ್ದ ಎ ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ

author img

By

Published : Apr 1, 2023, 4:13 PM IST

Updated : Apr 1, 2023, 5:49 PM IST

ಜೆಡಿಎಸ್​​ ಹಾಗೂ ಅರಕಲಗೂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಎ ಟಿ ರಾಮಸ್ವಾಮಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

AT ramaswamy joins BJP
ಜೆಡಿಎಸ್ ತೊರೆದಿದ್ದ ಎ ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ
ಎ ಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ

ನವದೆಹಲಿ/ಬೆಂಗಳೂರು: ಶಾಸಕ ಸ್ಥಾನ ಹಾಗೂ ಜೆಡಿಎಸ್​​ಗೆ ರಾಜೀನಾಮೆ ಸಲ್ಲಿಸಿದ ಅರಕಲಗೂಡು ಜೆಡಿಎಸ್ ಶಾಸಕ ಎ ಟಿ ರಾಮಸ್ವಾಮಿ ಅವರು ಇಂದು ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ನಿನ್ನೆಯಷ್ಟೇ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ ರಾಮಸ್ವಾಮಿ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದರು. ಇಂದು ದೆಹಲಿಯಲ್ಲಿ ಪಕ್ಷದ ಕಚೇರಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್​ ಠಾಕೂರ್​ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈಗಾಗಲೇ ಜೆಡಿಎಸ್​ ಘೋಷಣೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಅರಕಲಗೂಡು ಕ್ಷೇತ್ರದಿಂದ ಎ. ಮಂಜು ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿತ್ತು. ಹೀಗಾಗಿ ಎ.ಟಿ. ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ ಆಗುವ ಮಾತುಗಳು ಕೇಳಿ ಬಂದಿತ್ತು. ಈ ನಡುವೆ ಕಾಂಗ್ರೆಸ್​ಗೆ ಸೇರಲಿದ್ದಾರೆ ಎಂಬ ಮಾತುಗಳೂ ಇದ್ದವು.

ರಾಮಸ್ವಾಮಿ ಬಿಜೆಪಿ ಸೇರ್ಪಡೆ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ''ಎ.ಟಿ ರಾಮಸ್ವಾಮಿ ಅವರು ರೈತ ಪರ ಹೋರಾಟಗಾರರಾಗಿದ್ದು, ಒಕ್ಕಲಿಗ ಸಮಾಜದ ಮುಖಂಡರು ಆಗಿದ್ದಾರೆ. ಅವರ ಸೇರ್ಪಡೆಯಿಂದ ಬಿಜೆಪಿಗೆ ಹೆಚ್ಚಿನ ಶಕ್ತಿ ಬಂದಂತಾಗಿದೆ. ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರವು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದು, ಇದು ಮುಂಬರುವ ಚುನಾವಣೆಯಲ್ಲಿ ಸಾಬೀತಾಗಲಿದೆ'' ಎಂದರು.

ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಎ ಟಿ ರಾಮಸ್ವಾಮಿ ರಾಜೀನಾಮೆ ಜೆಡಿಎಸ್​ಗೂ ಗುಡ್​ ಬೈ

ಇದೇ ವೇಳೆ ಮಾತನಾಡಿದ ರಾಮಸ್ವಾಮಿ, ''ನಾನು ಹಣ ಬಲದ ಮುಂದೆ ಬಲಿಪಶುವಾದೆ, ಭ್ರಷ್ಟಾಚಾರ ಎತ್ತಿ ತೋರಿಸಿದ್ದಕ್ಕೆ ನನ್ನನ್ನು ವಿಕ್ಟಿಮ್ ಮಾಡಲಾಯಿತು. ಈ ಕಾರಣಕ್ಕಾಗಿಯೇ ಬಿಜೆಪಿಗೆ ಸೇರಿದ್ದೇನೆ ಎಂದು ಹೇಳಿದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷ ಜೆ. ಪಿ ನಡ್ಡಾ ಅವರಿಗೆ ಧನ್ಯವಾದ ತಿಳಿಸಿದ ರಾಮಸ್ವಾಮಿ, ಜನಸೇವೆಗಾಗಿ ತಾವು ಸದಾ ಕಾರ್ಯ ನಿರ್ವಹಿಸುವುದಾಗಿ ಹೇಳಿದರು.

ರಾಜೀನಾಮೆ ಪತ್ರ ಸಲ್ಲಿಕೆ ಬಳಿಕ ನಿನ್ನೆ ಮಾತನಾಡಿದ್ದ ರಾಮಸ್ವಾಮಿ, ಶಾಸಕಾಂಗ ಪಕ್ಷದ ನಾಯಕರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಜೆಡಿಎಸ್‌ನವರು ಶಾಸಕನಾಗಿ ಕೆಲಸ ಮಾಡಲು ಅವಕಾಶ ನೀಡಿದ್ದರು. ನಾನೆಂದೂ ವೈಯಕ್ತಿಕ ಲಾಭಕ್ಕಾಗಿ ಆಡಳಿತ ಮಾಡಿಲ್ಲ ಎಂದಿದ್ದರು.

ರಾಮಸ್ವಾಮಿ ರಾಜೀನಾಮೆ ಕುರಿತಂತೆ ಮಾತನಾಡಿದ್ದ ಸಚಿವ ಕೆ ಗೋಪಾಲಯ್ಯ, ರಾಮಸ್ವಾಮಿ ಅವರು ನೂರಕ್ಕೆ ನೂರರಷ್ಟು ಬಿಜೆಪಿಗೆ ಬರುತ್ತಾರೆ. ನಾನೇ ಖುದ್ದಾಗಿ ದೆಹಲಿಗೆ ಕರೆದುಕೊಂಡು ಹೋಗಿ ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ಪಕ್ಷಕ್ಕೆ ಬರಮಾಡಿಕೊಳ್ಳುತ್ತೇನೆ ಎಂದಿದ್ದರು. ಈ ಬೆನ್ನಲ್ಲೇ ಇಂದು ಅವರು ಬಿಜೆಪಿ ಸೇರಿದ್ದಾರೆ.

ಇದನ್ನೂ ಓದಿ: ಎ ಟಿ ರಾಮಸ್ವಾಮಿ ಬಿಜೆಪಿ ಸೇರ್ಪಡೆ ಖಚಿತ, ನಾನು ಬಿಜೆಪಿ ಬಿಡಲ್ಲ: ಸಚಿವ ಕೆ ಗೋಪಾಲಯ್ಯ

Last Updated : Apr 1, 2023, 5:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.