ETV Bharat / state

ಬಾಲಕನ ಮೇಲೆ ದೌರ್ಜನ್ಯ ಪ್ರಕರಣ ಸಂಬಂಧ ಓರ್ವ ಆರೋಪಿಯ ಬಂಧನವಾಗಿದೆ : ಆರಗ ಜ್ಞಾನೇಂದ್ರ - Attack on Child in basavana bagewadi case

ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಬಗ್ಗೆ ತೀವ್ರ ನೋವಾಗಿದೆ, ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ಈಗಾಗಲೇ ಕೇಸ್ ದಾಖಲಾಗಿದ್ದು, ಕ್ರಮದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವರು ವಿವರಿಸಿದರು..

ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ
author img

By

Published : Mar 25, 2022, 6:00 PM IST

ಬೆಂಗಳೂರು : ಬಸವನ ಬಾಗೇವಾಡಿ ತಾಲೂಕಿನಲ್ಲಿ ಏಳು ವರ್ಷದ ಬಾಲಕನ ಮೇಲೆ ನಡೆದ ದೌರ್ಜನ್ಯ ಘಟನೆಯ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವಿಧಾನ ಪರಿಷತ್‌ನ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸಚೇತಕ ಪ್ರಕಾಶ್ ರಾಥೋಡ್, ಬಸವನಬಾಗೇವಾಡಿ ತಾಲೂಕಿನ ವಡ್ಡೋಡಗಿ ಗ್ರಾಮದಲ್ಲಿ ಬಾಲಕನನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಿಂಸೆ ಮಾಡಿರುವ ಪ್ರಕರಣ ಪ್ರಸ್ತಾಪಿಸಿದರು. ಇಂತಹ ಕೃತ್ಯ ಮಾಡಿದವರನ್ನ ಕೂಡಲೇ ಬಂಧಿಸಬೇಕು. ಬಾಲಕನ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಹಿಜಾಬ್ ಧರಿಸಿ ಯಾವುದೇ ಪರೀಕ್ಷೆ ಬರೆಯಲು ಅವಕಾಶವಿಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಇದು ಅಮಾನವೀಯ ಘಟನೆ. ಹೋಳಿ ಹಬ್ಬದ ದಿನ ಈ ಘಟನೆ ಆಗಿದೆ. ಘಟನೆ ಆಗಿ ಎರಡು ದಿನ ಕಳೆದರೂ ಯಾವುದೇ ಕ್ರಮವನ್ನ ಪೊಲೀಸರು ತೆಗೆದುಕೊಂಡಿಲ್ಲ. ಕೂಡಲೇ ಸರ್ಕಾರ ಕ್ರಮವಹಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಗೃಹ ಸಚಿವರು, ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ಕುರಿತು ಪ್ರಕಟವಾಗಿದೆ.

ಜಿಲ್ಲಾ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಬಗ್ಗೆ ತೀವ್ರ ನೋವಾಗಿದೆ, ಇದನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ಈಗಾಗಲೇ ಕೇಸ್ ದಾಖಲಾಗಿದ್ದು, ಕ್ರಮದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು. ಈ ವೇಳೆ ಸಭಾಪತಿ ಸ್ಥಾನದಲ್ಲಿದ್ದ ತೇಜಸ್ವಿನಿ ಗೌಡ, ಪ್ರತಿಪಕ್ಷ ಸದಸ್ಯರ ಹೇಳಿಕೆಗೆ ದನಿಗೂಡಿಸಿ, ಇಂತಹ ಅಮಾನವೀಯ ಪ್ರಕರಣಗಳು ನಡೆಯಬಾರದು ಎಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.