ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ ಮುಂದುವರೆದಿದೆ. ನಗರದ ಬ್ಯಾಟರಾಯನಪುರದ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಂಡ ಬಳಿಕ ಪುಂಡರು ದಾಂಧಲೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ಪೆಟ್ರೋಲ್ ಹಾಕಿಸಿಕೊಂಡ ಬಳಿಕ ಹಣ ಕೇಳಿದ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಚ್ಚು ಬೀಸಿದ್ದಾರೆ. ಈ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದರ ಆಧಾರದ ಮೇಲೆ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಬ್ಯಾಟರಾಯನಪುರ ಪೊಲೀಸರು ಸೆರೆ ಹಿಡಿದ್ದಾರೆ. ಉದಯ್ ಮತ್ತು ಕಿರಣ್ ಎಂಬುವರನ್ನು ಬಂಧಿಸಲಾಗಿದ್ದು, ಇನ್ನೊಬ್ಬನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ: ಮನೆಯಂಗಳದಲ್ಲಿ ಸುತ್ತಾಡಿದ ಚಿರತೆ- ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ