ಬೆಂಗಳೂರು: ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೇ ಆತನ ಕುಟುಂಬಸ್ಥರು ಹಲ್ಲೆ ಮಾಡಿರುವ ಘಟನೆ ನಗರದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಕಾಲೋನಿ ಬಳಿ ನಡೆದಿದೆ.
ಕಮೀಷನರ್ ಆದೇಶದಂತೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಅಂಬರೀಶ್ನನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಪಿಎಸ್ಐ ಸೇರಿದಂತೆ ಮಹಿಳಾ ಸಿಬ್ಬಂದಿ ತೆರಳಿದ್ದರು. ಆಗ ಅಂಬರೀಶ್ ಪತ್ನಿ ಜಯಲಕ್ಷ್ಮೀ ಹಾಗೂ ನಾದಿನಿ ಪವಿತ್ರಾ ಪೊಲೀಸರ ಬರುವಿಕೆ ಕುರಿತು ಪ್ರಶ್ನಿಸಿ ಅವಾಜ್ ಹಾಕಿದ್ದಾರೆ. ಅಷ್ಟೇ ಅಲ್ಲದೆ ಪೇದೆಗಳ ಸಮವಸ್ತ್ರ ಎಳೆದಾಡಿ ಬೆದರಿಕೆ ಹಾಕಿದ್ದಾರೆ.
ಸದ್ಯ ಆರೋಪಿಗಳ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ರೌಡಿಶೀಟರ್ ಅಂಬರೀಶ್ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.