ಬೆಂಗಳೂರು : ಮಹಾನಗರದಲ್ಲಿ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು ಹಳೇ ದ್ವೇಷ ಹಿನ್ನೆಲೆಯಲ್ಲಿ ರೌಡಿಶೀಟರ್ ಮೇಲೆ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಕೋಗಿಲು ನಿವಾಸಿ ಹಾಗೂ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಲೋಕೇಶ್ (28) ಮೇಲೆ ಮಾರಣಾಂತಿಕ ಹಲ್ಲೆಗೆ ಒಳಗಾದವ.
ಠಾಣೆಯ ಸಮೀಪದ ಇಟ್ಟಿಗೆ ಫ್ಯಾಕ್ಟರಿ ಬಳಿ ಹೋಗುವಾಗ ಅಟ್ಯಾಕ್ ಮಾಡಿದ ದುಷ್ಕರ್ಮಿಗಳು ಲಾಂಗ್ ಹಾಗೂ ಮಚ್ಚಿನಿಂದ ಲೋಕೇಶ್ ತಲೆ, ಹೊಟ್ಟೆ ಹಾಗೂ ಕೈಗಳಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಹಲ್ಲೆಗೊಳಗಾದ ರೌಡಿಶೀಟರ್ನನ್ನು ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ದಾಖಲಿಸಲಾಗಿದೆ. ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.