ದೇವನಹಳ್ಳಿ: ಅಕ್ರಮವಾಗಿ ವಿದೇಶಕ್ಕೆ ಸಾಗಿಸುತ್ತಿದ್ದ ವಿದೇಶಿ ಹಣವನ್ನ ಸಾಗಿಸುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದು, ಆತನಿಂದ ಭಾರತೀಯ ರೂಪಾಯಿ ಮೌಲ್ಯದ 35 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ ಎಂದು ಆದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದೇಶಿ ಕರೆನ್ಸಿ ಅಕ್ರಮ ಸಾಗಾಟ: ಆದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುದಾಬಿಗೆ ಹೋಗುತ್ತಿದ್ದ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆತನ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 45 ಸಾವಿರ ಡಾಲರ್ ಮತ್ತು 185 ಧಿರಮ್ ವಿದೇಶಿ ಕರೆನ್ಸಿ ಪತ್ತೆಯಾಗಿದೆ.
ಭಾರತೀಯ ರೂಪಾಯಿ ಮೌಲ್ಯದ ಪ್ರಕಾರ 35 ಲಕ್ಷ 45 ಸಾವಿರದ 385 ರೂಪಾಯಿ ವಶಕ್ಕೆ ಪಡೆಯಲಾಗಿದೆ. ವಾಯು ಗುಪ್ತಚರ ಘಟಕ (AIU)ದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
(ಇದನ್ನೂ ಓದಿ: ಅರಣ್ಯಾಧಿಕಾರಿಯ ರಾಯಲ್ ಎನ್ಫೀಲ್ಡ್ ಎಗರಿಸಿದ ಕಳ್ಳರು: ನಂಬರ್ ಪ್ಲೇಟ್ ಬದಲಿಸಿ ಮಾರಾಟ ಮಾಡುವ ಗ್ಯಾಂಗ್)