ETV Bharat / state

ಕೊರೊನಾ ಪರೀಕ್ಷೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಪ್ರಯೋಗಾಲಯ ಸ್ಥಾಪನೆ: ಸಚಿವ ಶ್ರೀರಾಮುಲು ಅಭಯ - Corona issue 2020

ಕೊರೊನಾ ಪ್ರಕರಣ ಎಲ್ಲೆಡೆ ಗದ್ದಲ ಸೃಷ್ಟಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ವೈರಸ್ ಪರೀಕ್ಷೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಪ್ರಯೋಗಾಲಯ ಸ್ಥಾಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವ ಶ್ರೀರಾಮುಲು ವಿಧಾನಸಭೆಯಲ್ಲಿ ಹೇಳಿದರು.

bengaluru
ಕೊರೊನಾ ಪರೀಕ್ಷೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಪ್ರಯೋಗಾಲಯ ಸ್ಥಾಪನೆಗೆ ಯತ್ನ
author img

By

Published : Mar 18, 2020, 4:33 PM IST

ಬೆಂಗಳೂರು: ಕೊರೊನಾ ವೈರಸ್ ಪರೀಕ್ಷೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಪ್ರಯೋಗಾಲಯ ಸ್ಥಾಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ವಿಧಾನಸಭೆಯಲ್ಲಿ ತಿಳಿಸಿದರು.

ಈಗಾಗಲೇ ಬೆಂಗಳೂರಿನಲ್ಲಿ 2, ಮೈಸೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ 1 ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಕಲಬುರಗಿ, ಮಂಗಳೂರಿನಲ್ಲಿ ಪ್ರಯೋಗಾಲಯಗಳ ಸಲಕರಣೆಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಹೇಳಿದರು.

ಕೊರೊನಾ ಪರೀಕ್ಷೆಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಪ್ರಯೋಗಾಲಯ ಸ್ಥಾಪನೆಗೆ ಯತ್ನ

ಶೂನ್ಯವೇಳೆಯಲ್ಲಿ ಶಾಸಕರಾದ ಅಜಯ್‌ ಸಿಂಗ್, ಪ್ರಿಯಾಂಕ್‍ ಖರ್ಗೆ , ಕರುಣಾಕರರೆಡ್ಡಿ ಮತ್ತಿತರರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಶ್ರೀರಾಮುಲು, ಚೀನಾ, ಇಟಲಿ, ಜಪಾನ್, ಇರಾನ್ ಸೇರಿ ವಿಶ್ವದಲ್ಲಿ 1.90 ಲಕ್ಷ ಜನರಿಗೆ ಸೋಂಕು ತಗುಲಿದೆ. 70 ಸಾವಿರ ಮಂದಿ ಗುಣಮುಖರಾಗಿದ್ದಾರೆ. 7,500 ಜನ ಸಾವನ್ನಪ್ಪಿದ್ದಾರೆ. ಭಾರತದಲ್ಲಿ 139 ಮಂದಿಗೆ ಸೋಂಕು ತಗುಲಿದ್ದು, 3 ಜನ ಸಾವನ್ನಪ್ಪಿದ್ದಾರೆ. 13 ಮಂದಿ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ 11 ಮಂದಿಗೆ ಸೋಂಕು ತಗುಲಿದೆ. ಕಲಬುರಗಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು.

2,146 ಮಂದಿ ಅವರ ರಕ್ತದ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 943 ಮಂದಿಯ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 776 ಮಂದಿಗೆ ಸೋಂಕಿಲ್ಲ ಎಂದು ದೃಢಪಟ್ಟಿದೆ. 177 ಮಂದಿ ವರದಿ ಬಾಕಿ ಇದೆ. ವಿದೇಶಗಳಿಂದ ಬಂದ 1,74,000 ಮಂದಿಯನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ರಾಜ್ಯ ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ವಿಧಾನಸೌಧ, ವಿಕಾಸಸೌಧ, ಹೈಕೋರ್ಟ್ ಮೊದಲಾದ ಕಡೆಗಳಲ್ಲಿ ಥರ್ಮಲ್ ಸ್ಕಾನಿಂಗ್ ಮಾಡಲು ಆದೇಶಿಸಿದ್ದೇವೆ‌ ಎಂದು ತಿಳಿಸಿದರು.

ರಾಜ್ಯದಲ್ಲಿ ಇದುವರೆಗೆ ಐದು ಪ್ರಯೋಗಾಲಯಗಳನ್ನು ಪ್ರಾರಂಭಿಸಲಾಗಿದೆ. ಮಂಗಳೂರಿನಲ್ಲಿ ಪ್ರಯೋಗಾಲಯ ಸ್ಥಾಪನೆಗೆ ಉಪಕರಣ ಖರೀದಿಗೆ ಅನುಮತಿ ನೀಡಿದ್ದೇವೆ. ಸದನ ಮುಗಿದ ಬಳಿಕ ಎಲ್ಲ ವಲಯಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ಎಲ್ಲ ಜಿಲ್ಲೆಗಳಲ್ಲಿ ಪ್ರಯೋಗಾಲಯ ಸ್ಥಾಪಿಸುವ ಬಗ್ಗೆ ಸಿಎಂ ಜತೆ ಚರ್ಚಿಸುತ್ತೇನೆ ಎಂದರು.

ಕಲಬುರ್ಗಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಬಳಿಕ ಅವರ ಸಂಪರ್ಕದಲ್ಲಿದ್ದ 71 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದೇವೆ. ಕುಟುಂಬದ 4 ಮಂದಿ ಪೈಕಿ ಮೂರು ಮಂದಿಗೆ ಸೋಂಕಿಲ್ಲ ಎಂದು ವರದಿ ಬಂದಿದೆ. ಅವರ ಮಗಳಿಗೆ ಸೋಂಕು ತಗುಲಿದೆ. ವಿಶ್ವದಲ್ಲಿ ಸೋಂಕು ಪೀಡಿತ ಹೆಚ್ಚು ಅಪಾಯಕಾರಿ 14 ದೇಶಗಳಿಂದ ಬರುವ ಎಲ್ಲ ರೋಗಿಗಳನ್ನು ತಪಾಸಣೆಗೆ ಒಳಪಡಿಸಿದ್ದೇವೆ. ಸ್ಥಳೀಯ ವಿಮಾನ ನಿಲ್ದಾಣಗಳ ಪ್ರಯಾಣಿಕರನ್ನು ತಪಾಸಣೆ ನಡೆಸಬೇಕು ಎಂಬ ಬೇಡಿಕೆ ಬಂದಿದೆ. ಅದಕ್ಕೆ ಅನುಮತಿ ನೀಡುವಂತೆ ನಾಗರಿಕ ವಿಮಾನ ಯಾನ ನಿರ್ದೇಶನಾಲಯದ ಅನುಮತಿ ಕೇಳಲಾಗಿದೆ. ಅಷ್ಟೇ ಅಲ್ಲದೇ, ವಿದೇಶದಲ್ಲಿದ್ದ ರಾಜ್ಯದ 111 ಮಂದಿ ವಿದ್ಯಾರ್ಥಿಗಳನ್ನು ಕೇಂದ್ರ ಸರ್ಕಾರದ ಸಹಕಾರದೊಂದಿಗೆ ತಾಯ್ನಾಡಿಗೆ ಕರೆತರಲಾಗಿದೆ. ಉಳಿದವರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.