ETV Bharat / state

ಆ.3ರಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ; ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಸಾಧ್ಯತೆ

CM Siddaramaiah meets PM Modi : ರಾಜ್ಯದ ಅನುದಾನ ಸಂಬಂಧ ಪ್ರಧಾನಮಂತ್ರಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಲಿದ್ದಾರೆ.

ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ
ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ
author img

By

Published : Aug 1, 2023, 4:43 PM IST

Updated : Aug 1, 2023, 5:01 PM IST

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಸ್ಟ್ 3ರಂದು 11 ಗಂಟೆಗೆ ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಸಿದ್ದರಾಮಯ್ಯ ಅವರು, ರಾಜ್ಯದ ಯೋಜನೆಗಳು, ಅನುದಾನ ಸಂಬಂಧ ಬೇಡಿಕೆ ಇಡಲಿದ್ದಾರೆ. ಸಿಎಂ ಆದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ.

ರಾಜ್ಯ ಸರ್ಕಾರ ಪ್ರಮುಖ ಯೋಜನೆ ಅನ್ನಭಾಗ್ಯಕ್ಕೆ ಅಕ್ಕಿ ಪೂರೈಕೆ ಸಂಬಂಧ ಪ್ರಧಾನಿಗೆ ಮನವಿ ಮಾಡುವ ಸಾಧ್ಯತೆ ಇದೆ. ಕೇಂದ್ರದ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದರ ಜೊತೆಗೆ ನೀರಾವರಿ ಯೋಜನೆಗಳಿಗೆ ಅನುದಾನ, ಜಲಜೀವನ್ ಮಿಷನ್, ನರೇಗಾಗೆ ಹೆಚ್ಚಿನ ಹಣಕಾಸು ನೆರವು ನೀಡುವಂತೆ ಸಿದ್ದರಾಮಯ್ಯ ಕೋರಲಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ 5,495 ಕೋಟಿ ರೂ. ಗಳ ಮಧ್ಯಂತರ ಪರಿಹಾರಕ್ಕೆ ವಿಶೇಷ ಅನುದಾನ ನೀಡುವಂತೆ ಕೋರುವ ಸಾಧ್ಯತೆ ಇದೆ. ಜೊತೆಗೆ ಬರ ಮಾನದಂಡವನ್ನು ಪರಿಷ್ಕರಿಸಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆಯೂ ಮನವಿ ಮಾಡುವ ಸಾಧ್ಯತೆ ಇದೆ. ಜಿಎಸ್‌ಟಿಯಲ್ಲೂ ರಾಜ್ಯದ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ‌ ಎಂದು ಪ್ರಧಾನಿ ಮೋದಿ ಬಳಿ ಸಿದ್ದರಾಮಯ್ಯ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಅದೇ ದಿನ ಸಿದ್ದರಾಮಯ್ಯ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದಾರೆ. ಕೇಂದ್ರ ಸಚಿವರ ಜೊತೆಗೂ ರಾಜ್ಯದ ಪ್ರಮುಖ ರಸ್ತೆ ಯೋಜನೆಗಳು, ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಸಲ್ಲಿಸಲಿದ್ದಾರೆ.

ತಡೆಹಿಡಿದ ಅನುದಾನ ಬಿಡುಗಡೆ : ಹಿಂದಿನ ಕಾಮಗಾರಿಗಳಿಗೆ ತಡೆಹಿಡಿಯಲಾಗಿದ್ದ ಅನುದಾನ ಬಿಡುಗಡೆ ಆದೇಶವನ್ನು ಕಾಂಗ್ರೆಸ್ ಹಿಂಪಡೆದಿದ್ದು, ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿನ ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅನುದಾನ ತಡೆಹಿಡಿದ ಆದೇಶವನ್ನು ಹಿಂಪಡೆದಿದ್ದಾರೆ. ಈ ಸಂಬಂಧ ಆರ್ಥಿಕ ಇಲಾಖೆ ಅನುದಾನ ಬಿಡುಗಡೆಗೆ ಆದೇಶ ಹೊರಡಿಸಿದೆ.

ಕಳೆದ ವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರೂ ಅನುದಾನ ಬಿಡುಗಡೆಯಾಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕಾಮಗಾರಿ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದರು. ಇತ್ತ ಚಾಲ್ತಿ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗದ ಕಾರಣ ಕಾಮಗಾರಿಗಳು ಸ್ಥಗಿತವಾಗಿವೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳು ನಿಂತುಹೋಗಿತ್ತು.‌ ಈ ಸಂಬಂಧ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಅನುದಾನದ ಬಿಡುಗಡೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ : ಅರ್ಥಪೂರ್ಣ, ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ, ಉದ್ಘಾಟಕರಾಗಿ ಸುತ್ತೂರು ಸ್ವಾಮೀಜಿ ಹೆಸರು ಪ್ರಸ್ತಾಪ: ಸಿಎಂ ಸಿದ್ದರಾಮಯ್ಯ

Last Updated : Aug 1, 2023, 5:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.