ಬೆಂಗಳೂರು : ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಂತಕರು ಶವವನ್ನು ಕಸದ ರಾಶಿ ಬಳಿ ಬಿಸಾಕಿ ಹೋಗಿದ್ದಾರೆ. ಬನಶಂಕರಿಯ ಯಾರಬ್‌ನಗರದ ಮಂಜುನಾಥ್ ಕೊಲೆಯಾದ ದುದೈರ್ವಿ.
ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮಂಜುನಾಥ್ನನ್ನು ಹಂತಕರು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಸುಮನಹಳ್ಳಿಯ ಕಸದ ರಾಶಿ ಬಳಿ ಶವ ಬಿಸಾಕಿ ಎಸ್ಕೇಪ್ ಆಗಿದ್ದಾರೆ.
28 ವರ್ಷದ ಮಂಜುನಾಥ್ಗೆ ಇದೇ ತಿಂಗಳ 20ರಂದು ನಿಶ್ಚಿತಾರ್ಥ ನಿಗದಿಯಾಗಿತ್ತು. ಮೃತ ಶವ ಪತ್ತೆ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಂತಕರು ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬುದರ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ತಲೆಮರೆಸಿಕೊಂಡಿರುವ ಕೊಲೆಗಡುಕರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.