ETV Bharat / state

ಆ್ಯಪ್​​ಗಳ ಮೂಲಕ ಆಟೋ‌ ಸೇವೆ ಸ್ಥಗಿತ: ಒಮ್ಮತದ ಅಭಿಪ್ರಾಯ ತಿಳಿಸಿ ಎಂದ ಹೈಕೋರ್ಟ್

ಆ್ಯಪ್​​ಗಳ ಮೂಲಕ ಆಟೋ‌ ಸೇವೆ ಒದಗಿಸುವುದನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್​ ಒಮ್ಮತದ ಅಭಿಪ್ರಾಯವನ್ನು ತಿಳಿಸುವಂತೆ ಸರ್ಕಾರ ಹಾಗೂ ಆ್ಯಪ್ ಕಂಪನಿಗಳಿಗೆ ಸೂಚಿಸಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Oct 13, 2022, 1:47 PM IST

ಬೆಂಗಳೂರು: ಓಲಾ, ಉಬರ್ ಮತ್ತು ರ‍್ಯಾಪಿಡೋ ಕಂಪನಿಗಳ ಮೊಬೈಲ್ ಆ್ಯಪ್ ಆಧಾರಿತ ಸಾರಿಗೆ ಸೇವೆಗೆ ಆಟೋ ರಿಕ್ಷಾ ಬಳಸುವ ಕುರಿತು ಒಮ್ಮತದ ಅಭಿಪ್ರಾಯವನ್ನು ತಿಳಿಸುವಂತೆ, ಸರ್ಕಾರ ಹಾಗೂ ಆ್ಯಪ್ ಕಂಪನಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಶುಕ್ರವಾರಕ್ಕೆ ವಿಚಾರಣೆ ಮುಂದೂಡಿಕೆ: ಆಟೋ ರಿಕ್ಷಾಗಳು ಆ್ಯಪ್​ ಮೂಲಕ ಸಲ್ಲಿಸುತ್ತಿದ್ದ ಸೇವೆಯನ್ನು ಸ್ಥಗಿತಗೊಳಿಸಿದ ಸಾರಿಗೆ ಇಲಾಖೆ ಕ್ರಮವನ್ನು ಪ್ರಶ್ನಿಸಿ, ಎಎನ್‌ಐ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ಜೆ.ಎಸ್.ಎಂ.ಕಮಲ್ ಅವರಿದ್ದ ನ್ಯಾಯಪೀಠ, ಕೆಲ ಕಾಲ ವಾದವನ್ನು ಆಲಿಸಿ, ಆಟೋ ರಿಕ್ಷಾಗಳ ಸೇವೆಗೆ ಸಂಬಂಧಿಸಿದಂತೆ ಒಮ್ಮತದ ಅಭಿಪ್ರಾಯವನ್ನು ತಿಳಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಇದನ್ನೂ ಓದಿ: ಆ್ಯಪ್ ಆಧಾರಿತ ಆಟೋಗಳಿಗೆ ನಿರ್ಬಂಧ.. ನಿಯಮ ಜಾರಿಗೆ ಸೈಬರ್ ಕ್ರೈಂ ಸಹಾಯ

ಈ ಸೇವೆ ಬೆರಳು ತುದಿಯಲ್ಲಿ ಲಭ್ಯವಾಗುತ್ತಿದೆ. ಜತೆಗೆ, ಆರಾಮದಾಯಕವೂ ಇದೆ. ಆದರೆ, ಒಮ್ಮೆ ಬುಕ್ ಮಾಡಿ ರದ್ದು ಮಾಡಿದಲ್ಲಿ ಅದಕ್ಕೆ ಹೆಚ್ಚುವರಿ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಇದು ವಾಸ್ತವವಾಗಿದ್ದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಅರ್ಜಿದಾರರು ಒಪ್ಪುವಂತಹ ಅಭಿಪ್ರಾಯಗಳನ್ನು ತಿಳಿಸಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು.

ತಾತ್ಕಾಲಿಕ ಪರಿಹಾರ ಕಂಡುಕೊಳ್ಳಬೇಕಿದೆ ಎಂದ ಕೋರ್ಟ್​: ಸೇವೆ ಸ್ಥಗಿತಗೊಳಿಸುವುದರಿಂದ ಅಂತಿಮವಾಗಿ ಸಾರ್ವಜನಿಕರಿಗೆ ಅನಾನೂಕೂಲ ಉಂಟಾಗುತ್ತದೆ. ಹಾಗೆಯೇ ಪರವಾನಗಿ ಪಡೆಯದೇ ಆಟೋ ಸೇವೆ ಒದಗಿಸುವುದಕ್ಕೆ ಅವಕಾಶ ಇಲ್ಲ. ಹೆಚ್ಚಿನ ಪ್ರಯಾಣ ದರ ಪಡೆಯುವುದಕ್ಕೆ ಅವಕಾಶ ಇಲ್ಲ. ಹಾಗಾಗಿ ಈ ವಿಚಾರದಲ್ಲಿ ತಾತ್ಕಾಲಿಕ ಪರಿಹಾರ ಕ್ರಮ ಕೈಗೊಳ್ಳಬೇಕಿದೆ ಎಂದು ನ್ಯಾಯಪೀಠ ಮೌಖಿಕವಾಗಿ ಅಭಿಪ್ರಾಯ ವ್ಯಕ್ತ ಪಡಿಸಿತು.

ಇದು ಕಾನೂನು ಬಾಹಿರ: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹೆಚ್ಚುವರಿ ಶುಲ್ಕ ಪಡೆಯುತ್ತಿಲ್ಲ ಕಮಿನಷ್ ಆಧಾರದಲ್ಲಿ ಶುಲ್ಕ ಪಡೆಯಲಾಗುತ್ತಿದೆ. ಈ ಆ್ಯಪ್ ಬುಕ್ಕಿಂಗ್ ಪರವಾನಿಗೆ ನೀಡುವ ಸಂದರ್ಭದಲ್ಲಿ ಆಟೋ ರಿಕ್ಷಾ ಸೇವೆ ಒದಗಿಸುವಂತಿಲ್ಲ ಎಂಬುದಾಗಿ ಉಲ್ಲೇಖಿಸಿರಲಿಲ್ಲ. ಹೀಗಾಗಿ ಆಟೋ ಸೇವೆ ಪಡೆದುಕೊಳ್ಳಲಾಗಿತ್ತು. ಇದೀಗ ಸ್ಥಗಿತಗೊಳಸಿರುವುದು ಕಾನೂನು ಬಾಹಿರ ಎಂದು ವಿವರಿಸಿದರು.

ಇಂದು ತುರ್ತು ಸಭೆ: ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದಿಸಿ, ಆ್ಯಪ್ ಆಧಾರಿತ ಆಟೋಗಳು ಸಾರ್ವಜನಿಕರಿಂದ ಹೆಚ್ಚಿನ ದರ ಪಡೆಯುತ್ತಿವೆ. ಸೇವೆ ಒದಗಿಸಲು ಯಾವುದೇ ಪರವಾನಗಿ ಪಡೆದುಕೊಂಡಿಲ್ಲ. ಹಾಗಾಗಿ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ವಿವರಿಸಿದರು. ಅಲ್ಲದೆ, ಅರ್ಜಿದಾರರೊಂದಿಗೆ ಇಂದು ಮಧ್ಯಾಹ್ನ ತುರ್ತು ಸಭೆ ನಡೆಸಿ, ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಿ ಕೋರ್ಟ್ ಗೆ ಮಾಹಿತಿ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ನಾಳೆ 10:30ಕ್ಕೆ ಮುಂದೂಡಿತು. ಅಲ್ಲದೇ ಪ್ರಕರಣದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವವರೆಗೆ ತಾತ್ಕಾಲಿಕ ಅರ್ಜಿದಾರರು ಸಹ ಸಚಾರ್ಜ್ ಪಡೆಯಬಾರದು ಎಂದು ಹೈಕೋರ್ಟ್ ಮೌಖಿಕವಾಗಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.