ETV Bharat / state

ಸಂತೋಷ್​ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆ: ಪ್ರತಿಭಟನಾ ಅರ್ಜಿ ಸಲ್ಲಿಸಿದ ಕುಟುಂಬ - ETV Bharat kannada News

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರತಿಭಟನಾ ಅರ್ಜಿಯನ್ನು ಸಂತೋಷ್ ಕುಟುಂಬಸ್ಥರು ಸಲ್ಲಿಸಿದ್ದಾರೆ.

Special Court of Representatives
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
author img

By

Published : Apr 6, 2023, 9:20 PM IST

ಬೆಂಗಳೂರು : ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​ ಸಲ್ಲಿಸಿದ್ದರು. ಇದೀಗ ಸಂತೋಷ್ ಕುಟುಂಬದವರು ಪ್ರತಿಭಟನಾ ಅರ್ಜಿ ದಾಖಲಿಸಲಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಏಪ್ರಿಲ್ 10ರಂದು ನ್ಯಾಯಾಲಯವು ಅರ್ಜಿದಾರರ ಪರ ವಕೀಲರ ವಾದ ಆಲಿಸಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಮತ್ತು ಸಹಚರರು ಕಾಮಗಾರಿ ಬಿಲ್ ಪಾವತಿಗೆ ಶೇ.40 ಕಮಿಷನ್ ಕೇಳುತ್ತಿದ್ದಾರೆ ಎಂದು ವಾಟ್ಸ್ಆ್ಯಪ್ ಸಂದೇಶ ಕಳುಹಿಸಿ ಗುತ್ತಿಗೆದಾರ ಸಂತೋಷ್, ಏಪ್ರಿಲ್ 12ರಂದು ಉಡುಪಿಯ ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಚಿವರಾಗಿದ್ದ ಈಶ್ವರಪ್ಪ, ಬಸವರಾಜ ಕುರಿ, ರಮೇಶ್ ಹಾಗೂ ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಹಾಗೂ ಶ್ರೀನಿವಾಸ್ ಮರಂಗಪ್ಪನವರ್ ಅವರನ್ನು ಪ್ರಕರಣದಲ್ಲಿ ಆರೋಪಿಗಳಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ತನಿಖಾಧಿಕಾರಿಗಳು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ಕೈಬಿಡಲಾಗಿದೆ ಎಂದು 2022ರ ಜುಲೈ 20ರಂದು ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದರಿಂದ ಅತೃಪ್ತಿಗೊಂಡ ಸಂತೋಷ್ ಸಹೋದರ ಪ್ರಶಾಂತ್ ಪಾಟೀಲ್ ಉಡುಪಿ ಪೊಲೀಸರು ಬಿ ರಿಪೋರ್ಟ್ ಜೊತೆಗೆ ಸಲ್ಲಿಸಿರುವ ದಾಖಲೆಗಳನ್ನು ಒದಗಿಸಲು ನಿರ್ದೇಶಿಸುವಂತೆ ಕೋರಿ ನ್ಯಾಯಾಲಯಕ್ಕೆ 2022ರ ಆಗಸ್ಟ್ 23ರಂದು ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಶಾಸಕ ಜಮೀರ್ ಅಹಮದ್​ಗೆ ಹಿನ್ನಡೆ

ಪ್ರಕರಣದ ಮತ್ತಷ್ಟು ವಿವರ: ಸಂತೋಷ್ ಪಾಟೀಲ್ ಅವರು ನಡೆಸಿರುವ ಕಾಮಗಾರಿಗಳು ಹಾಗೂ ಆ ಸಂಬಂಧ ಈಶ್ವರಪ್ಪ ಅವರೊಂದಿಗೆ ನಡೆಸಿರುವ ಮಾತುಕತೆಗೆ ಸಂಬಂಧಿಸಿದಂತೆ ಹಲವು ದಾಖಲೆಗಳಿವೆ. ಸಂತೋಷ್ ಆತ್ಮಹತ್ಯೆಗೆ ಈಶ್ವರಪ್ಪ ಅವರೇ ಕಾರಣ ಎಂಬುದನ್ನು ಸಾಬೀತುಪಡಿಸುವ ಹಲವು ಸಾಕ್ಷ್ಯಗಳು ಲಭ್ಯವಿದ್ದರೂ ಸಾಕ್ಷ್ಯಾಧಾರ ಕೊರತೆಯ ಕಾರಣ ನೀಡಿ ಪೊಲೀಸರು ಬಿ-ವರದಿ ಸಲ್ಲಿಸಿದ್ದಾರೆ. ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ ಹಲವು ಪ್ರಭಾವಿಗಳ ಕೈವಾಡವಿದೆ ಎಂದು ಪ್ರಶಾಂತ್ ಪಾಟೀಲ್ ಆಪಾದಿಸಿದ್ದರು.

ತನಿಖಾಧಿಕಾರಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸದೆ, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ. ಆದ್ದರಿಂದ ಬಿ ರಿಪೋರ್ಟ್ ಜೊತೆಗಿನ ಸಂತೋಷ್ ಸಾವನ್ನಪ್ಪಿದ್ದ ಸ್ಥಳದ ಮಹಜರು, ಪಂಚನಾಮೆ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳು, ಕರೆ ದಾಖಲೆಗಳು, ಸಿಸಿಟಿವಿ ತುಣುಕು ಸೇರಿದಂತೆ ವಿವಿಧ ದಾಖಲೆ ಪೂರೈಸಲು ಆದೇಶಿಸಬೇಕು ಎಂದು ಕೋರಿದ್ದರು. ಅರ್ಜಿದಾರರ ಕೋರಿಕೆಯನ್ನು ಮಾನ್ಯ ಮಾಡಿದ್ದ ನ್ಯಾಯಾಲಯವು ದಾಖಲೆಗಳನ್ನು ಸಲ್ಲಿಸಲು ತನಿಖಾಧಿಕಾರಿಗೆ 2023ರ ಜನವರಿ 7ರಂದು ಆದೇಶಿಸಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಪಕ್ಷದ ಮಾನ್ಯತೆ ಕೋರಿ ಹೈಕೋರ್ಟ್​ ಮೊರೆ ಹೋದ ಆಪ್​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.