ETV Bharat / state

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಅಂತಹ ಹೇಳಿಕೆ ನಿಲ್ಲಿಸಿ: ಬಿಎಸ್​ವೈ - ನಾಯಕತ್ವ ಬದಲಾವಣೆ ವದಂತಿ

ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದೇ ನಮ್ಮ ಉದ್ದೇಶ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬಿಎಸ್​ವೈ
ಬಿಎಸ್​ವೈ
author img

By

Published : Aug 10, 2022, 5:31 PM IST

Updated : Aug 10, 2022, 6:10 PM IST

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಅಂತಹ ಚರ್ಚೆಯೇ ಅನಗತ್ಯವಾಗಿದ್ದು, ಎಲ್ಲರೂ ಈ ವಿಷಯವನ್ನು ಇಲ್ಲಿಗೇ ನಿಲ್ಲಿಸಿ ಎಂದು ನಾಯಕತ್ವ ಬದಲಾವಣೆ ವದಂತಿಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ.

ಮಂತ್ರಾಲಯಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ 7-8 ತಿಂಗಳು ಇರುವಾಗ ಬದಲಾವಣೆ ಪ್ರಶ್ನೆ ಬರುವುದಿಲ್ಲ. ಮುಖ್ಯಮಂತ್ರಿಗಳಾಗಿ ಬೊಮ್ಮಾಯಿ ಅವರೇ ಮುಂದುವರೆಯುತ್ತಾರೆ. ಅನಗತ್ಯವಾದ ಚರ್ಚೆ ಸರಿ ಅಲ್ಲ. ಇವತ್ತು ಎಲ್ಲರೂ ಇಲ್ಲಿಗೆ ನಿಲ್ಲಿಸಬೇಕು. ಯಾರೂ ಕೂಡ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೂ ಇಲ್ಲ. ಯಾರೂ ಏನೇ ಹೇಳಿದರೂ ಆ ರೀತಿಯ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಮಾತನಾಡಿದರು

ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದೇ ನಮ್ಮ ಉದ್ದೇಶ. ನಾನು ಈಗಾಗಲೇ ವಿಧಾನಸಭೆಯಲ್ಲಿಯೇ ಇದನ್ನು ಹೇಳಿದ್ದೇನೆ. ಯಾರೋ ಒಂದಿಬ್ಬರು ತಾವು ಮುಂದೆ ಮುಖ್ಯಮಂತ್ರಿ ಆಗುತ್ತೇವೆ ಅನ್ನೋ ಭ್ರಮೆಯಲ್ಲಿದ್ದಾರೆ. ಆದರೆ, ಅವರಿಗೆ ನಾವು ಅವಕಾಶ ಮಾಡಿಕೊಡುವುದಿಲ್ಲ. ನಿಶ್ಚಿತವಾಗಿ ಬಿಜೆಪಿಯವರೇ ಮುಂದಿನ ಮುಖ್ಯಮಂತ್ರಿಗಳಾಗ್ತಾರೆ. ನಾವೆಲ್ಲರೂ ಸಾಮೂಹಿಕವಾಗಿ ಪ್ರವಾಸ ಮಾಡಿ, ಪಕ್ಷ ಅಧಿಕಾರಕ್ಕೆ ಬರಲು 135 ಸ್ಥಾನಗಳನ್ನು ಗೆಲ್ಲುತ್ತೇವೆ. ನಮಗೆ ನರೇಂದ್ರ ಮೋದಿಯಂತಹ ನಾಯಕ ಇರುವುದರಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದರು.

ಮೊನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದರು ಅಷ್ಟೇ. ಆದರೆ, ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಆಗುತ್ತದೆ. ಇದಕ್ಕೆ ಹೈಕಮಾಂಡ್ ನಾಯಕರು ಕೂಡ ಸಹಕಾರ ಕೊಡುತ್ತಾರೆ ಎಂದು ಬಿಎಸ್​ವೈ ಸ್ಪಷ್ಟಪಡಿಸಿದರು.

ನಾನು ಏನೂ ಚರ್ಚೆ ಮಾಡಿಲ್ಲ: ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ನಾನು ಬಹಿರಂಗವಾಗಿ ಹೇಳಿದ್ದೇನೆ. ಆದರೆ, ಅಂತಿಮವಾಗಿ ಅವರ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡೋದು ಹೈಕಮಾಂಡ್. ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡುವ ಬಗ್ಗೆ ಅಮಿತ್ ಶಾ ಜೊತೆ ನಾನು ಏನೂ ಚರ್ಚೆ ಮಾಡಿಲ್ಲ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಸಹಜವಾಗಿಯೇ ಅವಧಿ ಮುಗಿದ ನಂತರ ರಾಜ್ಯಾಧ್ಯಕ್ಷರ ಬದಲಾವಣೆ ಆಗುತ್ತದೆ. ಅದರ ಬಗ್ಗೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಇದ್ದಾರೆ. ಅವರು ನನ್ನ ಜೊತೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿ ಹೋಗಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದರು.

ಬಿಎಸ್​ವೈ ಕುಟುಂಬದಿಂದ ಮಂತ್ರಾಲಯ ಪ್ರವಾಸ: ಯಡಿಯೂರಪ್ಪ ಕುಟುಂಬ ಸಮೇತ ಮಂತ್ರಾಲಯಕ್ಕೆ ತೆರಳಿದ್ದಾರೆ. ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳ ಜೊತೆ ಪ್ರವಾಸ ಕೈಗೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಅವರು, ಕುಟುಂಬ ಸಮೇತ ಮಂತ್ರಾಲಯಕ್ಕೆ ಹೋಗುತ್ತಿದ್ದೇವೆ. ಬಹಳ ದಿನಗಳು ನಂತರ ರಾಯರ ದರ್ಶನ ಮಾಡಿ ವಾಪಸ್ ಬರುತ್ತೇನೆ. ಮಂತ್ರಾಲಯದಿಂದ ಬಂದ ನಂತರ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಹೇಳಿದರು.

ಓದಿ: ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರದ ವಿಸ್ತರಣೆ-ಬಲವರ್ಧನೆಗೆ ಕ್ರಮ: ಆರಗ ಜ್ಞಾನೇಂದ್ರ

Last Updated : Aug 10, 2022, 6:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.