ETV Bharat / state

ನಮ್ಮ ಕಾರ್ಯಕರ್ತರಿಗೆ ಬೆದರಿಕೆ, ಕಿರುಕುಳ ಎದುರಾದರೆ ತಕ್ಷಣ ಪಕ್ಷ ನೆರವಿಗೆ ಬರಲಿದೆ: ಬಿ.ವೈ.ವಿಜಯೇಂದ್ರ - ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಬೆದರಿಕೆ

B.Y.Vijayendra promise to BJP workers: ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ, ಕಿರುಕುಳ ನೀಡುತ್ತಿರುವುದು ಕಂಡುಬಂದರೆ ಅವರ ನೆರವಿಗೆ ತಕ್ಷಣ ಪಕ್ಷ ಬರಲಿದೆ ಎಂದು ಬಿ.ವೈ.ವಿಜಯೇಂದ್ರ ಭರವಸೆ ನೀಡಿದ್ದಾರೆ.

vijayendra
ಬಿ.ವೈ.ವಿಜಯೇಂದ್ರ
author img

By ETV Bharat Karnataka Team

Published : Nov 27, 2023, 6:43 AM IST

Updated : Nov 27, 2023, 5:33 PM IST

ಬೆಂಗಳೂರು: ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತರಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಈ ಸಂಬಂಧ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್‌​ನಲ್ಲಿ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ ಎಂದು ಹೇಳಿದ್ದಾರೆ.

ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಅಧಿಕಾರವನ್ನು ಪೊಲೀಸರಿಗೆ ನೀಡಿಲ್ಲ. ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ ಎಂದು ಭರವಸೆ ನೀಡಿದ್ದಾರೆ.

  • ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
    ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು…

    — Vijayendra Yediyurappa (@BYVijayendra) November 26, 2023 " class="align-text-top noRightClick twitterSection" data=" ">

ಸದ್ಯದಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಇದೇ ವೇಳೆ ಅವರು ಮಾಹಿತಿ ಒದಗಿಸಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ : ನಿಖಿಲ್ ಕುಮಾರಸ್ವಾಮಿ - ವಿಜಯೇಂದ್ರ ಸಹೋದರರಂತೆ ಒಟ್ಟಾಗಿ ಹೋಗುತ್ತಾರೆ; ಹೆಚ್​ಡಿಕೆ

ಲೋಕಸಭಾ ಚುನಾವಣೆಯ ಪೂರ್ವ ಸಿದ್ಧತೆ ಹಾಗೂ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಕೇತುಗಾನಹಳ್ಳಿ ಗ್ರಾಮದ ಅವರ ತೋಟದ ಮನೆಯಲ್ಲಿ ಭೇಟಿಯಾದರು.

ಬಹಳ ದಿನಗಳ ಹಿಂದೆಯೇ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ರಾಜ್ಯದ ಅಭಿವೃದ್ಧಿ ದೃಷ್ಟಿಯ ಉದ್ದೇಶದಿಂದ ಭೇಟಿಯಾಗಿದ್ದೇವೆ ಎಂದು ಭೇಟಿ ಬಳಿಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.

ವಿಜಯೇಂದ್ರ ಮಾತನಾಡಿ, ನಮ್ಮದು ರಾಷ್ಟ್ರೀಯ ಪಕ್ಷ. ಈ ನಿಟ್ಟಿನಲ್ಲಿ ಪಕ್ಷ ಎಂದ ಮೇಲೆ ಸಣ್ಣ ಪುಟ್ಟ ಗೊಂದಲಗಳು ಇದ್ದೆ ಇರುತ್ತವೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ. ರಾಜ್ಯದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಮುಕ್ತ ಕ್ಷೇತ್ರವನ್ನಾಗಿ ಮಾಡೋದೆ ನಮ್ಮ ಗುರಿ. ನಮ್ಮ ಪಕ್ಷದ ಎಲ್ಲಾ ನಾಯಕರ ತೀರ್ಮಾನ ಒಂದೇ ಆಗಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದಕ್ಕೆ ಕೈ ಜೋಡಿಸುತ್ತಾರೆ ಎಂದು ಹೇಳಿದರು.

Last Updated : Nov 27, 2023, 5:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.