ETV Bharat / state

ಬಾಬಾ ಬುಡನ್‌ಗಿರಿ ದತ್ತಾತ್ರೇಯ ಪೀಠ ಪೂಜೆ ಸಲ್ಲಿಸುವ ವಿಚಾರ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ - High Court instructs govt

ಬಾಬಾ ಬುಡನ್‌ಗಿರಿ ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಮುಂದಿನ ವಿಚಾರಣೆವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ.

Bababudangiri
ಬಾಬಾ ಬುಡನ್‌ಗಿರಿ
author img

By

Published : Oct 12, 2022, 9:04 AM IST

Updated : Oct 12, 2022, 9:12 AM IST

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿ ವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯ ಕುರಿತು ಸಲ್ಲಿಕೆಯಾಗಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್​ ಸೂಚನೆ ನೀಡಿದೆ.

ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಮೇಲ್ಮನವಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿ ಪರಿಗಣಿಸಿ ಮೂರು ವಾರದಲ್ಲಿ ಪ್ರತಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ನ್ಯಾಯಪೀಠ, ಮುಂದಿನ ವಿಚಾರಣೆವರೆಗೆ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದೆ.

ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಕಾಯ್ದೆ-1997ರನ್ನು ಹೈಕೋರ್ಟ್ ರದ್ದುಪಡಿಸಿದೆ. ಹಾಗಾಗಿ, ಸಚಿವ ಸಂಪುಟದ ನಿರ್ಣಯದಂತೆ ದತ್ತಾತ್ರೇಯ ಪೀಠದಲ್ಲಿ ಇಸ್ಲಾಂ ಮತ್ತು ಹಿಂದೂ ಸಂಪ್ರದಾಯದಂತೆ ಪೂಜಾ ವಿಧಿ ವಿಧಾನ ನಡೆಸಲು ಮುಜಾವರ್ ಹಾಗೂ ಅರ್ಚಕರನ್ನು ನೇಮಿಸಲು ಅವಕಾಶವಿಲ್ಲ ಎಂದು ಮೇಲ್ಮನವಿದಾರ ಆಕ್ಷೇಪಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?: ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ಮುಸ್ಲಿಂ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್ ಅವರನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಆದೇಶಿಸಿತ್ತು. ಅದನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ, ಪ್ರಕರಣವನ್ನು ಸರ್ಕಾರಕ್ಕೆ ಹಿಂದಿರುಗಿಸಿತ್ತು. ಹಾಗೆಯೇ, ಪ್ರಕರಣದ ಕುರಿತು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ ನೀಡಿರುವ ವರದಿ ಗಣನೆಗೆ ತೆಗೆದುಕೊಳ್ಳದೇ ಪ್ರಕರಣವನ್ನು ಹೊಸದಾಗಿ ಪರಿಗಣಿಸಬೇಕು ಎಂದು 2021ರ ಸೆ.28ರಂದು ನಿರ್ದೇಶಿಸಿತ್ತು. ಈ ತೀರ್ಪು ಪ್ರಶ್ನಿಸಿ ಗೌಸ್ ಮೊಹಿದ್ದೀನ್ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ದತ್ತಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ನೇಮಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್

Last Updated : Oct 12, 2022, 9:12 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.