ETV Bharat / state

ವಿಧಾನಪರಿಷತ್​ನ ಒಂದು ಸ್ಥಾನಕ್ಕೆ ಉಪಚುನಾವಣೆ: ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ - MLC byelection

ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ ಆಗಿದ್ದಾರೆ.

Baburao Chinchansur
ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ
author img

By

Published : Aug 4, 2022, 6:41 PM IST

Updated : Aug 4, 2022, 6:54 PM IST

ಬೆಂಗಳೂರು: ಸಿ.ಎಂ ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್​ನ ಒಂದು ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವಿರೋಧ ಆಯ್ಕೆ ಆಗಿರುವುದಾಗಿ ಸಹಾಯಕ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಘೋಷಿಸಿದ್ದಾರೆ.

ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್​ನ ಒಂದು ಸ್ಥಾನಕ್ಕೆ ಸೆ.11 ರಂದು ಚುನಾವಣೆಯನ್ನು ನಿಗದಿ ಪಡಿಸಲಾಗಿತ್ತು. ಬಿಜೆಪಿಯಿಂದ ಚಿಂಚನಸೂರು ಹೊರತುಪಡಿಸಿ ಬೇರೆ ಯಾವ ಅಭ್ಯರ್ಥಿಗಳೂ ಕಣಕ್ಕಿಳಿದಿರಲಿಲ್ಲ. ಪರಿಷತ್​ನ ಒಂದು ಸ್ಥಾನಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಇಂದು ನಾಮಪತ್ರ ವಾಪಾಸ್ ತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಕಣದಲ್ಲಿ ಬೇರೆ ಯಾರೂ ಇಲ್ಲದ ಕಾರಣ ಏಕೈಕ ಅಭ್ಯರ್ಥಿಯಾಗಿದ್ದ ಬಾಬುರಾವ್ ಚಿಂನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಬೈಕ್​ ಹಿಂಬದಿ ಸವಾರರಿಗೆ ನಿರ್ಬಂಧ ಆದೇಶ ಕೆಲ ಗಂಟೆಗಳಲ್ಲೇ ವಾಪಸ್!

Last Updated : Aug 4, 2022, 6:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.