ETV Bharat / state

ಪ್ಯಾಕೇಜ್​ನಲ್ಲಿ ಕೆಲವು ಸಮುದಾಯಗಳ ಕಡೆಗಣನೆ: ಸಿದ್ದು ಭೇಟಿಯಾಗಿ ಮನವಿ ಸಲ್ಲಿಸಿದ ಮುಖಂಡರು - backward-communities leaders meet ex CM siddaramaiah

ಮುಖ್ಯಮಂತ್ರಿಗಳು ನಿನ್ನೆ ಘೋಷಣೆ ಮಾಡಿರುವ ಪ್ಯಾಕೇಜ್‍ನಲ್ಲಿ ಸವಿತಾ ಸಮಾಜ, ನೇಕಾರರು ಹಾಗೂ ಮಡಿವಾಳ ಸಮುದಾಯದವರಿಗೆ ಮಾತ್ರ ನೆರವು ಘೋಷಣೆ ಮಾಡಿದ್ದಾರೆ. ಆದರೆ, ಆ ವರ್ಗದವರಿಗೂ ನೆರವು ಸೂಕ್ತ ಪ್ರಮಾಣದಲ್ಲಿ ಸಿಕ್ಕಿಲ್ಲ ಎಂದು ಮುಖಂಡರು ಹೇಳಿದರು.

ಕೊರೊನಾ ಪ್ಯಾಕೇಜ್​
ಕೊರೊನಾ ಪ್ಯಾಕೇಜ್​
author img

By

Published : May 7, 2020, 2:31 PM IST

ಬೆಂಗಳೂರು : ಜೀವನೋಪಾಯಕ್ಕೆ ಸಾಂಪ್ರದಾಯಿಕ ವೃತ್ತಿ ಅವಲಂಬಿಸಿರುವ ವಿವಿಧ ಸಮುದಾಯಗಳ ಮುಖಂಡರು ಇಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೊರೊನಾ ಪ್ಯಾಕೇಜ್‍ನಲ್ಲಿ ಸರ್ಕಾರ ತಮ್ಮನ್ನು ಕಡೆಗಣಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ನಿನ್ನೆ ಘೋಷಣೆ ಮಾಡಿರುವ ಪ್ಯಾಕೇಜ್‍ನಲ್ಲಿ ಸವಿತಾ ಸಮಾಜ, ನೇಕಾರರು ಹಾಗೂ ಮಡಿವಾಳ ಸಮುದಾಯದವರಿಗೆ ಮಾತ್ರ ನೆರವು ಘೋಷಣೆ ಮಾಡಿದ್ದಾರೆ. ಆದರೆ, ಆ ವರ್ಗದವರಿಗೂ ನೆರವು ಸೂಕ್ತ ಪ್ರಮಾಣದಲ್ಲಿ ಸಿಕ್ಕಿಲ್ಲ ಎಂದು ಮುಖಂಡರು ಹೇಳಿದರು.

ಅಖಿಲ ಕರ್ನಾಟಕ ಗಾಣಿಗ ಮಹಾಸಭಾ, ಭಾವಸಾರ ಕ್ಷತ್ರಿಯ ಸಮಾಜ (ದರ್ಜಿಗಳು) ವಿಶ್ವಕರ್ಮ ಸೇವಾ ಸಮಿತಿ ಸೋಮವಂಶ ಆರ್ಯ ಕ್ಷತ್ರಿಯ ಸೇವಾ ಸಂಘ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಮಹಾ ಒಕ್ಕೂಟ, ಅಲೆಮಾರಿಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಪತ್ರಗಳನ್ನು ಸಲ್ಲಿಸಿದರು.

ವಿದ್ಯುತ್ ಮಗ್ಗ ನೇಕಾರರು, ಗಾಣಿಗರು, ಕುಂಬಾರ, ಕಮ್ಮಾರ, ಮೇದರು, ದರ್ಜಿಗಳು, ವಿಶ್ವಕರ್ಮ, ಅಲೆಮಾರಿಗಳು, ಬುಡಕಟ್ಟು ಸಮುದಾಯ, ಉಪ್ಪಾರರು, ಅರ್ಚಕರು, ಮಂಗಳವಾದ್ಯ ನುಡಿಸುವವರು, ಕಲಾವಿದರು, ಛಾಯಾಗ್ರಾಹಕರನ್ನು ಕೊರೊನಾ ಪ್ಯಾಕೇಜ್‍ನಲ್ಲಿ ಸೇರಿಸದಿರುವ ಬಗ್ಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮಿನಾರಾಯಣ ಅವರೂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಧನ್ಯವಾದ ಸಲ್ಲಿಸಿದ ಮುಖಂಡರು :

ಸರ್ಕಾರ ತಮ್ಮ ಸಮುದಾಯದವರಿಗೆ ನೆರವು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸವಿತಾ ಸಮಾಜ, ನೇಕಾರರು ಹಾಗೂ ಮಡಿವಾಳ ಸಮುದಾಯದವರು ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಸಂಘಟನೆಗಳ ಪ್ರಮುಖ ಬೇಡಿಕೆಗಳು :

1. ಕಬ್ಬಿಣ ಕೆಲಸಗಾರರು, ಕಲ್ಲಿನ ವಿಗ್ರಹ ತಯಾರು ಮಾಡುವವರು, ಚಿನ್ನ, ಬೆಳ್ಳಿ ಕೆಲಸದಲ್ಲಿರುವವರು, ಎರಕದ ಕೆಲಸಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ

2. ಮರಗೆಲಸ, ಗೊಂಬೆಗಳಿಗೆ ಬಣ್ಣ ಹಚ್ಚುವವರು, ಕರಕುಶಲ ಕೆಲಸದವರಿಗೆ ನೆರವು. ಲಕ್ಷಾಂತರ ಸಂಖ್ಯೆಯಲ್ಲಿರುವ ಟೈಲರ್​ಗಳಿಗೆ ಸಹಾಯ ಮಾಡುವಂತೆ ಒತ್ತಾಯ

3.ಶುದ್ಧ ಎಣ್ಣೆ ತಯಾರು ಮಾಡುವ ಗಾಣಿಗರಿಗೆ ಆರ್ಥಿಕ ನೆರವು. ವಿದ್ಯುತ್ ಮಗ್ಗಗಳನ್ನು ಹೊಂದಿರುವ ನೇಕಾರರನ್ನು ಪ್ಯಾಕೇಜ್‍ನಲ್ಲಿ ಸೇರಿಸಬೇಕು ಎಂಬುದು ಈ ಸಮುದಾಯಗಳ ಮುಖಂಡರ ಒತ್ತಾಯವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.