ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ 10 ಮಂದಿ ಆರೋಪಿತ ಅಭ್ಯರ್ಥಿಗಳಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಆರೋಪಿಗಳಾಗಿರುವ ಎಸ್. ಜಾಗೃತ್. ಸೋಮನಾಥ್, ರಘುವೀರ್, ಮಹಾಂತೇಶ್ಗೌಡ, ಸಿ.ಎಂ. ನಾರಾಯಣ, ಆರ್. ಮಧು, ಸಿ.ಕೆ.ದಿಲೀಪ್ ಕುಮಾರ್, ರಚನಾ ಹನುಮಂತ್, ಪ್ರವೀಣ್ ಕುಮಾರ್, ರಾಘವೇಂದ್ರ ಅವರಿಗೆ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗಳ ಅರ್ಜಿ ಮಾನ್ಯ ಮಾಡಿದೆ. ಅಲ್ಲದೆ, ಮಧ್ಯವರ್ತಿಗಳಾದ ಕೇಶವಮೂರ್ತಿ, ಶರತ್ ಕುಮಾರ್ ಅವರಿಗೆ ಜಾಮೀನು ಮಂಜೂರು ಲಭ್ಯವಾಗಿದೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಎಂ ಎಸ್ ಶ್ಯಾಮಸುಂದರ್ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಈಗಾಗಲೇ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಂಗ ಬಂಧನಲ್ಲಿರುವ ಅಗತ್ಯವಿರುವುದಿಲ್ಲ. ಹೀಗಾಗಿ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿದರು.
ಮನವಿ ಪುರಸ್ಕಿರಸಿದ ನ್ಯಾಯಪೀಠ ಅರ್ಜಿದಾರರಾದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳಾದ ಪೊಲೀಸ್ ಇಲಾಖೆಯ ಸೆಕ್ಷನ್ ಅಧಿಕಾರಿ ಆರ್.ಮಂಜುನಾಥ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹರೀಶ್ ಎಂಬುವರಿಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಷರತ್ತುಗಳು: ಒಂದು ಶ್ಯೂರಿಟಿ, 5 ಲಕ್ಷ ರೂ ಬಾಂಡ್, ನ್ಯಾಯಾಲಯಕ್ಕೆ 50 ಸಾವಿರ ಡಿಪಾಸಿಟ್ ಮಾಡಬೇಕು. ಪಾಸ್ಪೋರ್ಟ್ನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಸಾಕ್ಷ್ಯ ನಾಶಮಾಡಬಾರದು, ವಿಚಾರಣೆಗೆ ಹಾಜರಾಗಬೇಕು.
ಪ್ರಕರಣದ ಹಿನ್ನೆಲೆ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಸಿಐಡಿ ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ. ನರಸಿಂಹ ಮೂರ್ತಿ ಅವರು ಆರೋಪಿಗಳ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 120(ಕ್ರಿಮಿನಲ್ ಪಿತೂರಿ), 420 (ವಂಚನೆ), 465 (ನಕಲು), 468 (ವಂಚನೆಗೆ ವಿದ್ಯುನ್ಮಾನ ಸಾಧನ ಬಳಕೆ), 471 (ನಕಲಿ ದಾಖಲೆಯನ್ನು ನೈಜ ಎಂದು ಬಿಂಬಿಸುವುದು) ಜೊತೆಗೆ 340(ಹಲವು ಕೃತ್ಯಯಲ್ಲಿ ಭಾಗಿ) ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ, ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದನ್ನೂ ಓದಿ: ಈ ಕೆಲಸ ಮಾಡಿದ್ದು ಮೈತ್ರಿ ಸರ್ಕಾರ: ಆದರೆ ಆರೋಪ ನಮ್ಮ ಮೇಲೆ... ಸಚಿವ ಸೋಮಣ್ಣ