ETV Bharat / state

ಐಎಂಎ ವಂಚನೆ ಪ್ರಕರಣ: ರೋಷನ್ ಬೇಗ್​ಗೆ ಷರತ್ತುಬದ್ಧ ಜಾಮೀನು ಮಂಜೂರು - ಮಾಜಿ ಸಚಿವ ರೋಷನ್​​ ಬೇಗ್​​ಗೆ ಜಾಮೀನು ಮಂಜೂರು

ರೋಷನ್ ಬೇಗ್​ಗೆ ಷರತ್ತುಬದ್ಧ ಜಾಮೀನು ಮಂಜೂರು
ರೋಷನ್ ಬೇಗ್​ಗೆ ಷರತ್ತುಬದ್ಧ ಜಾಮೀನು ಮಂಜೂರು
author img

By

Published : Dec 5, 2020, 12:28 PM IST

Updated : Dec 5, 2020, 2:19 PM IST

12:25 December 05

ಐಎಂಎ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ರೋಷನ್ ಬೇಗ್​ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು : ಐ ಮಾನಿಟರಿ ಅಡ್ವೈಸರಿ (ಐಎಂಎ) ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನ ತೀರ್ಪು ಪ್ರಕಟಿಸಿರುವ ಕೋರ್ಟ್ ಆರೋಪಿ ರೋಷನ್ ಬೇಗ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಇಬ್ಬರು ವ್ಯಕ್ತಿಗಳು ಭದ್ರತೆ ನೀಡಬೇಕು. ಪಾಸ್ ಪೋರ್ಟ್​ ಅನ್ನು ತನಿಖಾಧಿಕಾರಿಗಳ ವಶಕ್ಕೆ ನೀಡಬೇಕು. ಪ್ರಕರಣ ಮುಗಿಯುವರಗೆ ತಿಂಗಳ 2 ಮತ್ತು 4ನೇ ಸೋಮವಾರ ತನಿಖಾಧಿಕಾರಿಗಳ ಎದರು ಹಾಜರಾಗಬೇಕು. ಮುಂದಿನ ತನಿಖೆಗೆ ಸಹಕಾರ ನೀಡಬೇಕು. ಸಾಕ್ಷ್ಯ ನಾಶಪಡಿಸಬಾರದು ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ವಿಳಾಸ ಬದಲಿಸಿದರೆ ಅದನ್ನು ತನಿಖಾಧಿಕಾರಿಗಳಿಗೆ ತಿಳಿಸಬೇಕು ಸೇರಿ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ಓದಿ:ಜನಪರ ವೇದಿಕೆಯಿಂದ ಅರೆ ಬೆತ್ತಲೆ ಪ್ರತಿಭಟನೆ.. ಹೋರಾಟಗಾರರು ಪೊಲೀಸರ ವಶಕ್ಕೆ

ಅನಾರೋಗ್ಯ ಹಿನ್ನೆಲೆಯಲ್ಲಿ ರೋಷನ್ ಬೇಗ್​ಗೆ ಜಾಮೀನು ನೀಡುವಂತೆ ವಾದಿಸಿದ್ದ ಬೇಗ್ ಪರ ವಕೀಲರು, ಪ್ರಕರಣದಲ್ಲಿ 35 ಆರೋಪಿಗಳಿಗೂ ಕೋರ್ಟ್ ಜಾಮೀನು ನೀಡಿದೆ. 36ನೇ ಆರೋಪಿಯಾಗಿರುವ ರೋಷನ್ ಬೇಗ್ ತನಿಖಾಧಿಕಾರಿಗಳು ನೋಟಿಸ್ ನೀಡಿದಾಗಲೆಲ್ಲಾ ವಿಚಾರಣೆಗೆ ಹಾಜರಾಗಿದ್ದಾರೆ. ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಪ್ರಸ್ತುತ ಆರೋಪಿಯ ಆರೋಗ್ಯ ಕ್ಷೀಣಿಸಿದ್ದು, ಚಿಕಿತ್ಸೆಯ ಅಗತ್ಯವಿದೆ. ಆದ್ದರಿಂದ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.

ಓದಿ:ಬ್ಲಾಕ್‌ ಬೋರ್ಡ್ ಮೇಲೆ ಡೆತ್​ ನೋಟ್​ ಬರೆದಿಟ್ಟು ಶಿಕ್ಷಕ ಆತ್ಮಹತ್ಯೆ

ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ ನವೆಂಬರ್ 22 ರಂದು ಬಂಧಿಸಲಾಗಿತ್ತು. ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್ ಬೇಗ್ ಈವರೆಗೂ ನ್ಯಾಯಾಂಗ ಬಂಧನದಲ್ಲಿದ್ದರು. 

Last Updated : Dec 5, 2020, 2:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.