ETV Bharat / state

ಡಿಜೆ ಹಳ್ಳಿ ಗಲಭೆ ಪ್ರಕರಣ: 115 ಮಂದಿ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು - dj halli case,

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ 115 ಮಂದಿ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

court
court
author img

By

Published : Jun 16, 2021, 11:01 PM IST

Updated : Jun 17, 2021, 7:38 AM IST

ಬೆಂಗಳೂರು: ಆರೋಪಿಗಳ ಗಮನಕ್ಕೆ ತರದೆ ತನಿಖಾ ಅವಧಿ ವಿಸ್ತರಿಸಿದ ಹಿನ್ನೆಲೆಯಲ್ಲಿ ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದ 115 ಮಂದಿ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ತಮಗೆ ಮಾಹಿತಿ ನೀಡದೇ ಪ್ರಕರಣದ ತನಿಖೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) 90 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ. ಇದು ನಿಯಮಬಾಹಿರ. ಹಾಗೆಯೇ, ಎನ್‌ಐಎ 90 ದಿನಗಳಲ್ಲಿಯೂ ತನಿಖೆಯ ಅಂತಿಮ ವರದಿ ಸಲ್ಲಿಸಿಲ್ಲ. ಹೀಗಾಗಿ ತಮಗೆ ಡೀಫಾಲ್ಟ್ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಪ್ರಕರಣದ ಆರೋಪಿಗಳಾದ ಮುಜಾಮಿಲ್ ಸೇರಿದಂತೆ 115 ಆರೋಪಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾ. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕ ಸದಸ್ಯ ಪೀಠ, ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ತನಿಖಾ ಅವಧಿ ವಿಸ್ತರಣೆಗೆ ಕೋರಿ ಅರ್ಜಿ ಸಲ್ಲಿಸಿದ ವಿಚಾರವನ್ನು ಆರೋಪಿಗಳ ಗಮನಕ್ಕೆ ತರಬೇಕು. ಆ ಕುರಿತು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ, ಅವರ ವಾದ ಆಲಿಸಬೇಕು.

ಆದರೆ, ಪ್ರಕರಣದಲ್ಲಿ ಆರೋಪಿಗಳ ಗಮನಕ್ಕೆ ತರದೆ, ತನಿಖಾ ಅವಧಿ ವಿಸ್ತರಿಸಿ ಎನ್ಐಎ ವಿಶೇಷ ನ್ಯಾಯಾಲಯ ಹೊರಡಿಸಿರುವ ಆದೇಶವು ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟು ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಅರ್ಜಿದಾರ ಆರೋಪಿಗಳು ತಲಾ ಎರಡು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯ ಮತ್ತು ತನಿಖಾಧಿಕಾರಿಗಳು ಕರೆದಾಗ ತಪ್ಪದೇ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.

ಪ್ರಕರಣದ ಹಿನ್ನೆಲೆ:

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಬಂಧಿ ನವೀನ್ ಫೇಸ್ ಬುಕ್ ನಲ್ಲಿ ಹಾಕಿದ್ದ ಪ್ರಚೋದನಕಾರಿ ಪೋಸ್ಟ್ ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಗಲಭೆಗೆ ಕಾರಣವಾಗಿತ್ತು. ಈ ಸಂಬಂಧ ಆರೋಪಿಗಳನ್ನು 2020ರ ಆಗಸ್ಟ್ 12ರಂದು ಪೊಲೀಸರು ಬಂಧಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿದ್ದ ಎನ್ಐಎ ನಿಗದಿತ 90 ದಿನಗಳಲ್ಲಿ ಪೂರ್ಣಗೊಳಿಸಬೇಕಿತ್ತು.

ಈ ಅವಧಿ 2020ರ ನವೆಂಬರ್ 9ಕ್ಕೆ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ನವೆಂಬರ್ 3 ರಂದು ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಎನ್‌ಐಎ, ತನಿಖಾ ಅವಧಿ ವಿಸ್ತರಿಸಲು ಮನವಿ ಮಾಡಿತ್ತು. ಕೋರಿಕೆ ಪುರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯ ಅದೇ ದಿನ ತನಿಖಾ ಅವಧಿಯನ್ನು 90 ದಿನಗಳ ಕಾಲ ವಿಸ್ತರಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

Last Updated : Jun 17, 2021, 7:38 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.