ETV Bharat / state

ಪಾದರಾಯನಪುರ ಹಲ್ಲೆ ಪ್ರಕರಣ : ಆರೋಪಿಗಳಿಗೆ ಹೈಕೋರ್ಟ್ ಜಾಮೀನು

ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ಜಾಮೀನು
ಹೈಕೋರ್ಟ್ ಜಾಮೀನು
author img

By

Published : May 29, 2020, 11:29 PM IST

ಬೆಂಗಳೂರು: ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ 126 ಆರೋಪಿಗಳಿಗೆ ಹೈಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ಆರೋಪಿಗಳಾದ ವಜೀರ್ ಖಾನ್, ಮತ್ತಿತರರು ಸೇರಿದಂತೆ 126 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ಅವರಿದ್ದ ಪೀಠ ವಿಚಾರಣೆ ನಡೆಸಿತು. ಬಳಿಕ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ಆರೋಪಿಗಳು ತಲಾ ಒಂದು ಲಕ್ಷ ರೂ. ಮೌಲ್ಯದ ವೈಯಕ್ತಿಕ ಬಾಂಡ್ ನೀಡಬೇಕು. ಅಷ್ಟೇ ಮೊತ್ತಕ್ಕೆ ಇಬ್ಬರು ವ್ಯಕ್ತಿಗಳ ವೈಯಕ್ತಿಕ ಭದ್ರತೆ ನೀಡಬೇಕು. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯ ನಾಶಪಡಿಸಲು ಅಥವಾ ತಿರುಚಲು ಪ್ರಯತ್ನಿಸಬಾರದು. ತನಿಖೆಗೆ ಸಹಕರಿಸಬೇಕು ಮತ್ತು ವಿಚಾರಣಾ ನ್ಯಾಯಾಲಯದ ಅನುಮತಿ ಇಲ್ಲದೇ ಕ್ಷೇತ್ರ ಬಿಟ್ಟು ಹೊರ ಹೋಗಬಾರದು ಎಂದು ಷರತ್ತುಗಳನ್ನು ವಿಧಿಸಿತು.

ಅಲ್ಲದೇ ಎಲ್ಲ ಆರೋಪಿಗಳಿಗೂ ಕೊರೊನಾ ಪರೀಕ್ಷೆ ನಡೆಸಬೇಕು. ಒಂದೊಮ್ಮೆ ಯಾವುದೇ ಆರೋಪಿಗೆ ಕೊರೊನಾ ಪಾಸಿಟಿವ್ ಇದ್ದರೆ ಕ್ವಾರಂಟೈನ್​ಗೆ ಒಳಪಡಿಸಬೇಕು. ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೀಠ ಸೂಚನೆ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರ ವಕೀಲರ, ಆರೋಪಿಗಳಿಗೆ ಜಾಮೀನು ನೀಡಿದರೆ ಅವರು ಕೊರೊನಾ ವೈರಸ್ ಹರಡಲು ಕಾರಣಕರ್ತರಾಗುತ್ತಾರೆ ಎಂಬ ವಾದವನ್ನು ಪುರಸ್ಕರಿಸಲು ಪೀಠ ನಿರಾಕರಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.