ETV Bharat / state

ಬೈಂದೂರು ದೋಣಿ ದುರಂತ: ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬೊಮ್ಮಾಯಿ ಸೂಚನೆ - Bommai meeting news

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದರು. ಈ ವೇಳೆ ಬೈಂದೂರು ದೋಣಿ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ಪರಿಹಾರ ಕೊಡಲು ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತದ ಜೊತೆ ಸಭೆ

author img

By

Published : Aug 21, 2020, 12:30 AM IST

ಬೆಂಗಳೂರು: ಬೈಂದೂರು ಕಿರಿಮಂಜೇಶ್ವರದಲ್ಲಿ ದೋಣಿ ದುರಂತದಿಂದ ಮೃತರಾದ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ವಿಶೇಷ ಹೆಚ್ಚುವರಿ ಪರಿಹಾರ ಕೊಡಿಸುವ ಸಲುವಾಗಿ ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತದ ಜೊತೆ ಸಭೆ ನಡೆಸಿದರು. ನೆರೆ, ಪ್ರವಾಹದ ಕುರಿತು ಸಮಗ್ರವಾಗಿ ಮಾಹಿತಿ ಪಡೆದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತದ ಜೊತೆ ಸಭೆ
ವಿಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತದ ಜೊತೆ ಸಭೆ

ಈ ವೇಳೆ ಹಾನಿಗೊಳಗಾದ ಮನೆಗಳ ಸರ್ವೇ ಹಾಗೂ 'ಎ', 'ಬಿ', 'ಸಿ' ವರ್ಗೀಕರಣದ ವೇಳೆ ಗರಿಷ್ಠ ಪರಿಹಾರ ನೀಡಲು ಕ್ರಮ ವಹಿಸಬೇಕು ಮತ್ತು ಬೆಳೆ ಹಾನಿ ಸಮೀಕ್ಷೆಗೆ ವಿಶೇಷ ಗಮನ ಹರಿಸಲು ಸೂಚಿಸಿದರು.

ಕೋವಿಡ್ ನಿರ್ವಹಣೆಯಲ್ಲಿ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಿಕೊಂಡು ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು. ಪ್ರಾಕೃತಿಕ ವಿಕೋಪ, ಕೃಷಿ ಚಟುವಟಿಕೆ, ಕೊರೊನಾ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಉಪ ವಿಭಾಗಾಧಿಕಾರಿ ರಾಜು ಕೆ., ಜಿಲ್ಲಾ ಆರೋಗ್ಯ ಅಧಿಕಾರಿ ಸುಧೀರ್ ಸೂಡ, ಕೃಷಿ ಉಪ ನಿರ್ದೇಶಕ ಕೆಂಪೇಗೌಡ, ಹಿರಿಯ ತೋಟಗಾರಿಕಾ ಅಧಿಕಾರಿ ಭುವನೇಶ್ವರಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.