ಬೆಂಗಳೂರು: ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಬೈರತಿ ಬಸವರಾಜ್ ಅವರನ್ನು ನೇಮಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ ಬಳಿಕ ಜಿಲ್ಲೆಗೆ ಉಸ್ತುವಾರಿ ಸಚಿವರು ಇರಲಿಲ್ಲ. ಇದೀಗ ದಾವಣಗೆರೆ ಉಸ್ತುವಾರಿ ಸಚಿವರಾಗಿರುವ ಬೈರತಿ ಬಸವರಾಜ್ರಿಗೆ ಚಿಕ್ಕಮಗಳೂರು ಉಸ್ತುವಾರಿಯನ್ನೂ ನೀಡಲಾಗಿದೆ.
ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಾಕಷ್ಟು ಮಳೆಯಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅನಾಹುತಗಳು ಸಂಭವಿಸುತ್ತಿದೆ. ಇದನ್ನು ಮನಗಂಡ ಸಿಎಂ ಬೊಮ್ಮಾಯಿ ಅವರು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ಗೆ ಚಿಕ್ಕಮಗಳೂರು ಉಸ್ತುವಾರಿ ನೀಡಿದ್ದಾರೆ.
ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬೆನ್ನಲ್ಲೇ ಬೈರತಿ ಚಿಕ್ಕಮಗಳೂರಿಗೆ ಭೇಟಿ ನೀಡಿ ಮಳೆ ಹಾನಿ ಪ್ರದೇಶಗಳಿಗೆ ತೆರಳಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮೂಡಿಗೆರೆ ಕ್ಷೇತ್ರದ ವ್ಯಾಪ್ತಿಗೆ ಬರುವ ಅರೇನೂರು ಗ್ರಾಮದ ತೋಟಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿ ಗ್ರಾಮಸ್ಥರು, ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದನ್ನೂ ಓದಿ: ಗಮನಕ್ಕೆ ತರದೇ ವಿಡಿಯೋ ನಿಷೇಧ ಆದೇಶ ಮಾಡಲಾಗಿದೆ, ನಮ್ಮ ಸರ್ಕಾರ ಪಾರದರ್ಶಕ: ಸಿಎಂ ಸ್ಪಷ್ಟನೆ