ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ 437 ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಮತದಾನಕ್ಕೆ ಮತದಾರರು ನಿಧಾನವಾಗಿ ಮತಗಟ್ಟೆಯತ್ತ ಮುಖ ಮಾಡುತ್ತಿದ್ದಾರೆ.
ಚುನಾವಣೆಗಾಗಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂಜಾನೆ 5 ಗಂಟೆಗೆ ಆಗಮಿಸಿ, ಮತಗಟ್ಟೆಗೆ ಬಂದು ಮತದಾನಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇವಿಎಂ ಯಂತ್ರ ಹಾಗೂ ವಿವಿಪ್ಯಾಡ್ ಸರಿಯಾಗಿ ಕೆಲಸ ಮಾಡುತ್ತಿದೆಯಾ ಎಂಬ ತಪಾಸಣೆಗೆ ಒಳಪಡಿಸಿ ಖಾತ್ರಿ ಪಡಿಸಿಕೊಂಡ ಬಳಿಕವಷ್ಟೇ ಮತದಾನಕ್ಕೆ ಅಧಿಕಾರಿಗಳು ಅನುವು ಮಾಡಿಕೊಟ್ಟರು.
ಮತಗಟ್ಟೆ ಬಳಿ ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.