ಬೆಂಗಳೂರು : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಹಿನ್ನೆಲೆ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗುತ್ತಿದೆ.
ಮತ್ತೊಂದೆಡೆ ಕಳೆದ ಐದಾರು ವರ್ಷಗಳಿಂದ ಶಿವಮೊಗ್ಗದಲ್ಲಿ ಕೆಲಸ ಮಾಡುತ್ತಿದ್ದ ಡಿವೈಎಸ್ಪಿ, ಇನ್ಸ್‌ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ಗಳನ್ನ ಕರೆಯಿಸಿಕೊಳ್ಳಲಾಗಿದೆ. ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಸುಮಾರು 250ಕ್ಕೂ ಹೆಚ್ಚು ಪೊಲೀಸರು ಶಿವಮೊಗ್ಗಕ್ಕೆ ತೆರಳಿದ್ದಾರೆ.
ಇದನ್ನೂ ಓದಿ: ಹರ್ಷನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ.. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರಿಂದ ಟಿಯರ್ ಗ್ಯಾಸ್ ಪ್ರಯೋಗ
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.