ETV Bharat / state

ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ: ಬಾಲಚಂದ್ರ ಜಾರಕಿಹೊಳಿ ಒತ್ತಾಯ - ಸಿಡಿ ವಿಚಾರವಾಗಿ ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ

ಜಲಸಂಪನ್ಮೂಲ ಸಚಿವ ‌ರಮೇಶ್​ ಜಾರಕಿಹೊಳಿ‌ ಅವರ ಸಿಡಿ ಪ್ರಕರಣ ಕುರಿತಂತೆ ಅವರ ಸಹೋದರ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಪ್ರಕರಣದ ಬಗ್ಗೆ ಸಿಐಡಿ ಅಥವಾ ಸಿಬಿಐ ತನಿಖೆ ಆಗಬೇಕು ಎಂದು ಸಿಎಂ ಅವರನ್ನು ಒತ್ತಾಯ ಮಾಡಿದ್ದೇನೆ ಎಂದಿದ್ದಾರೆ.

ಬಾಲಚಂದ್ರ ಜಾರಕಿಹೊಳಿ
Balachandra Jarkiholi
author img

By

Published : Mar 3, 2021, 10:30 AM IST

Updated : Mar 3, 2021, 11:52 AM IST

ಬೆಂಗಳೂರು: ಜಾರಕಿಹೊಳಿ ಕುಟುಂಬದ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ವಿದೇಶಗಳಿಂದ ಯೂಟ್ಯೂಬ್​​​ಗೆ ವಿಡಿಯೋವನ್ನು ಅಪ್ಲೋಡ್​ ಮಾಡಲಾಗಿದೆ. ಹಾಗಾಗಿ ಪ್ರಕರಣದ ಬಗ್ಗೆ ಸಿಐಡಿ ಅಥವಾ ಸಿಬಿಐ ತನಿಖೆ ಆಗಬೇಕು ಎಂದು ಸಿಎಂ ಅವರನ್ನು ಒತ್ತಾಯ ಮಾಡಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಸಹೋದರನ ಸಿಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಸಚಿವ ರಮೇಶ್ ಜಾರಕಿಹೊಳಿ‌ ಅವರದ್ದು ಎನ್ನಲಾದ ಸಿಡಿ ಬಹಿರಂಗಗೊಂಡ ಬೆನ್ನಲ್ಲೇ ಅವರ ಸಹೋದರ ಶಾಸಕ ಬಾಲಚಂದ್ರ ಜಾರಕಿಹೊಳಿ ಸಿಎಂ ಅಧಿಕೃತ ನಿವಾಸ ಕಾವೇರಿಗೆ ತೆರಳಿ ಮಾತುಕತೆ ನಡೆಸಿದರು.

ಓದಿ: ರಾಸಲೀಲೆ ವಿಡಿಯೋ ಫೇಕ್, ಈ ಬಗ್ಗೆ ಸಮಗ್ರ ತನಿಖೆಯಾಗಲಿ: ಸಚಿವ ರಮೇಶ್ ಜಾರಕಿಹೊಳಿ

ಸಿಎಂ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಈ ವಿಡಿಯೋ ಹಿಂದೆ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡ ಇದೆ. ಆ ರಾಜಕಾರಣಿ ಬಿಜೆಪಿಯವರಲ್ಲ, ಬೇರೆ ಪಕ್ಷದ ರಾಜಕಾರಣಿಯಾಗಿದ್ದಾರೆ. ಹೀಗಾಗಿ ಈ ಬಗ್ಗೆ ಸಮಗ್ರವಾಗಿ ತನಿಖೆ ಆಗಬೇಕು. ಸಿಎಂ ಕೂಡ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.

ಈ ಹಿಂದೆ ಹೆಚ್.ವೈ. ಮೇಟಿ ರಾಜೀನಾಮೆ ಕೊಡುವ ವೇಳೆ ಸಂತ್ರಸ್ತ ಮಹಿಳೆ ದೂರು‌ ನೀಡಿದ್ದರು. ಅದಕ್ಕೆ ಅವರು ರಾಜೀನಾಮೆ ಕೊಟ್ಟಿದ್ದರು. ಈಗ ರಮೇಶ್ ಜಾರಕಿಹೊಳಿ ಜೊತೆಗಿರುವ ಮಹಿಳೆ ಯಾರು ಎಂದೇ ಗೊತ್ತಿಲ್ಲ. ಆ ವಿಡಿಯೋ ಫೇಕ್ ಆಗಿದೆ. ಹೀಗಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಅಗತ್ಯತೆ ಇಲ್ಲ ಎಂದರು.

ಓದಿ: ಸಚಿವ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕಬ್ಬನ್ ಪಾರ್ಕ್ ಠಾಣೆಗೆ ಪ್ರಕರಣ ವರ್ಗಾವಣೆ

ಒಂದು ವೇಳೆ ಮುಂದೆ ಸಂತ್ರಸ್ತ ಮಹಿಳೆ ಬಂದು ದೂರು ನೀಡಿದರೆ ರಾಜೀನಾಮೆ ಬಗ್ಗೆ ನೋಡೋಣ, ಈಗ ಆ ಮಹಿಳೆ ದೂರು ನೀಡದೇ ಬರಿ ಯಾರೋ ಒಬ್ಬರು ಬಂದು ದೂರು ಕೊಟ್ಟರೆ ಹೇಗೆ, ಅದನ್ನು ದೂರು ಎಂತಲೂ ಪರಿಗಣಿಸಲು ಆಗುವುದಿಲ್ಲ. ಹೀಗಾಗಿ ನಾನಂತೂ ರಮೇಶ್​ಗೆ ರಾಜೀನಾಮೆ ಕೊಡಬೇಡಿ ಎಂದು ಹೇಳಿದ್ದೇನೆ. ಇಂದು ಮಧ್ಯಾಹ್ನ ಸಿಎಂ ಯಡಿಯೂರಪ್ಪ ಅವರನ್ನು ರಮೇಶ್ ಭೇಟಿ ಮಾಡಿ ವಿವರಣೆ ನೀಡಲಿದ್ದಾರೆ ಎಂದರು.

Last Updated : Mar 3, 2021, 11:52 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.