ಬೆಂಗಳೂರು: ಬೆಳಗಾವಿ ಸಾಹುಕಾರನ ತೆಕ್ಕೆಗೆ ಕರ್ನಾಟಕ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಅಧ್ಯಕ್ಷಗಾದಿ ಸಿಕ್ಕಿದೆ. ಕೈ, ದಳದ ಕಚ್ಚಾಟದಲ್ಲಿ ಅಧಿಕಾರದ ಗದ್ದುಗೆ ಏರುವಲ್ಲಿ ಬಿಜೆಪಿ ಸಫಲವಾಗಿದೆ.
ಕೆಎಂಎಫ್ ಅಧ್ಯಕ್ಷರಾಗಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಾಲಚಂದ್ರ ಜಾರಕಿಹೊಳಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಮಾಡಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸೂಚಕರ ಮೂಲಕ ನಾಮಪತ್ರ ಹಿಂಪಡೆದರು.
ಕಣದಲ್ಲಿ ಬಾಲಚಂದ್ರ ಜಾರಕಿಹೊಳಿ ಒಬ್ಬರೇ ಉಳಿದ ಕಾರಣಕ್ಕೆ ಮತದಾನ ಪ್ರಕ್ರಿಯೆ ನಡೆಸದೇ ಜಾರಕಿಹೊಳಿ ಅವರನ್ನೇ ಕೆಎಂಎಫ್ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿ ಅವಿರೋಧ ಆಯ್ಕೆಯನ್ನು ಪ್ರಕಟಿಸಲಾಯಿತು. ಜಾರಕಹೊಳಿ ಆಯ್ಕೆ ಸುದ್ದಿ ಹೊರಬೀಳುತ್ತಿದ್ದಂತೆ ಕೆಎಂಎಫ್ ಮುಂಭಾಗದಲ್ಲಿ ಬೆಂಬಲಿಗರು ವಿಜಯೋತ್ಸವ ಆಚರಿಸಿ ಸಂಭ್ರಮಾಚರಣೆ ಮಾಡಿದರು.