ETV Bharat / state

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ ನಿಷೇಧ: ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ - ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ

ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಡಿಸಿ ಕೆ ಎ ದಯಾನಂದ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ
ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ
author img

By

Published : Apr 12, 2023, 6:54 PM IST

ಬೆಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ರ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಿಬಿಎಂಪಿ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಕಾರ್ಯ ಮತ್ತು ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲೂ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಕೆ ಎ ದಯಾನಂದ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳ ಮೆರವಣಿಗೆ, ಸಾರ್ವಜನಿಕ ಭಾಷಣ, ಮನೆ ಮನೆಗೆ ಭೇಟಿ ನೀಡುವುದು, ಪಕ್ಷದ ಚಿಹ್ನೆ ಇರುವ ಬುಕ್ ಮತ್ತು ಬಟ್ಟೆಗಳನ್ನು ಹಂಚುವುದು, ಕರಪತ್ರಗಳನ್ನು ಹಂಚುವುದು ಇನ್ನು ಮುಂತಾದ ಚಟುವಟಿಕೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆ ಅನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ: ಶಿವಮೊಗ್ಗ ಬಿಜೆಪಿ ಘಟಕದ ಜವಾಬ್ದಾರಿಗಳಿಗೆ ಪಾಲಿಕೆ ಸದಸ್ಯರ ರಾಜೀನಾಮೆ

ಚುನಾವಣಾ ಪ್ರಚಾರಕ್ಕೆ 18 ವರ್ಷದವರಿಗಿಂತ ಕೆಳಗಿರುವ ಮಕ್ಕಳ ಬಳಕೆ ನಿಷೇಧ: ಇನ್ನೊಂದೆಡೆ 2023ರ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ 18 ವರ್ಷಕ್ಕಿಂತ ಕೆಳಗಿರುವ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಪ್ರಸಾದ್(ಮಾರ್ಚ್​ 23-2023) ರ ಪ್ರಕಟಣೆಯಲ್ಲಿ ತಿಳಿಸಿದ್ದರು. ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದ್ದು, ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ.

ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರದಲ್ಲಿ ಮಕ್ಕಳ ಬಳಕೆ ನಿಷೇಧ: ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.

ಕಾಯ್ದೆಯನ್ವಯ ಸೂಕ್ತ ಕಾನೂನು ಕ್ರಮ : ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ (ಪ್ರಚಾರ ಹಾಗೂ ಇನ್ನಿತರ ಕಾರ್ಯಗಳು) ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಹಾಗೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಈ ಕುರಿತು ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷ ಡಾ ಕೆ ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ : ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವಾರ್ಡನ್ ಅಮಾನತುಗೊಳಿಸಿ ಡಿಸಿ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.