ETV Bharat / state

ಬಜೆಟ್​ನಲ್ಲಿ 'ಕಲ್ಯಾಣವಿಲ್ಲದ' ಕರ್ನಾಟಕವಾಗಿದೆ : ಜೆಡಿಎಸ್‍ ಉಪನಾಯಕ ಬಂಡೆಪ್ಪ ಕಾಶೆಂಪೂರ್ - ಬಜೆಟ್​ ಕುರಿತು ಚರ್ಚಿಸಿದ ಬಂಡೆಪ್ಪ ಕಾಶೆಂಪೂರ್

ಸ್ವಾತಂತ್ರ್ಯ ಭಾರತದಲ್ಲಿ ಬದುಕುತ್ತಿರುವ ನಾವೆಲ್ಲ ಅದೃಷ್ಟವಂತರು. ಈ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವ ಹೆಸರಲ್ಲಿ ಬಜೆಟ್ ಮಂಡನೆ ಮಾಡಿದೆ ಎಂದು ಜೆಡಿಎಸ್‍ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಸರ್ಕಾರದ ವಿರುದ್ಧ ಹರಿಹಾಯ್ದರು.

bandeppa-kashempur
ಜೆಡಿಎಸ್‍ ಉಪನಾಯಕ ಬಂಡೆಪ್ಪ ಕಾಶೆಂಪೂರ್
author img

By

Published : Mar 15, 2022, 10:56 PM IST

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗ ಬಜೆಟ್​​ನಲ್ಲಿ ‘ಕಲ್ಯಾಣವಿಲ್ಲದ' ಕರ್ನಾಟಕ ಭಾಗವಾಗಿದೆ ಎಂದು ಮಾಜಿ ಸಚಿವ, ಜೆಡಿಎಸ್ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಬೇಸರ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ, ಪ್ರವಾಸೋದ್ಯಮ ಕ್ಷೇತ್ರಗಳ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.

ದೇಶಕಾಯುವ ಸೈನಿಕರಿಗೆ ಹೆಚ್ಚಿನ ಮಹತ್ವ: ಸ್ವಾತಂತ್ರ್ಯ ಭಾರತದಲ್ಲಿ ಬದುಕುತ್ತಿರುವ ನಾವೆಲ್ಲ ಅದೃಷ್ಟವಂತರು. ಈ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವ ಹೆಸರಲ್ಲಿ ಬಜೆಟ್ ಮಂಡನೆ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ಮತ್ತು ದೇಶಕಾಯುವ ಸೈನಿಕರಿಗೆ ಹೆಚ್ಚಿನ ಮಹತ್ವ ನೀಡಬೇಕಾಗಿರುವುದು ಅವಶ್ಯಕವಾಗಿದೆ ಎಂದು ಸಲಹೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ಮತ್ತು ಸೈನಿಕರ ಕುಟುಂಬಗಳಿಗೆ ಸರ್ಕಾರದಿಂದ ಗೌರವಧನ ಹಾಗೂ ಆ ಕುಟುಂಬಗಳಿಗೆ ಜಮೀನು ಒದಗಿಸಿಕೊಡುವ ಕೆಲಸವನ್ನು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮಾಡಬೇಕು. ಅವರಿಗಾಗಿ ಸರ್ಕಾರಗಳಿಂದ ವಿಶೇಷ ಯೋಜನೆ, ಕಾರ್ಯಕ್ರಮಗಳನ್ನು ಮಾಡಬೇಕು. ಈ ಸರ್ಕಾರ ಅಮೃತ ಮಹೋತ್ಸವ ಸಂಭ್ರಮದ ವೇಳೆಯಲ್ಲಿ ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದೆ. ಆದರೆ ಹೇಗೆ ದ್ವಿಗುಣ ಮಾಡುತ್ತೇವೆಂದು ಹೇಳಿಲ್ಲ. ರೈತರೆಲ್ಲರೂ ನಷ್ಟದಲ್ಲಿ ಜೀವನ ಮಾಡುತ್ತಿದ್ದಾರೆ. ನಾನು ಕೂಡ ರೈತನಾಗಿ ನಷ್ಟದಲ್ಲಿದ್ದೇನೆ. ನಾವು ಸರ್ಕಾರದಿಂದ ರೈತರಿಗೆ ಎಷ್ಟರ ಮಟ್ಟಿಗೆ ಪ್ರೋತ್ಸಾಹ ನೀಡುತ್ತಿದ್ದೇವೆ ಎಂಬುದರ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಸೂಚಿಸಿದರು.

ಎಪಿಎಂಸಿ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು: ನಾನು ಕೃಷಿ ಸಚಿವನಾಗಿದ್ದಾಗ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್​ನಲ್ಲಿ ಕೃಷಿಗೆ ಶೇ.70 ರಷ್ಟು ಪ್ರಾಮುಖ್ಯತೆ ನೀಡಿದ್ದರು. ಆದರೆ, ಈಗ ಶೇ.50 ರಷ್ಟು ಕೂಡ ಕೃಷಿಗೆ ಪ್ರಾಮುಖ್ಯತೆ ನೀಡಿಲ್ಲ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ರೈತರ ಸಾಲಮನ್ನಾದಷ್ಟು ಈಗ ರೈತರಿಗೆ ಸಾಲ ನೀಡಿಲ್ಲ. ರೈತರು ಬೆಳೆದಿರುವ ಬೆಳೆಗಳಿಗೆ ಸರ್ಕಾರದಿಂದ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ರೈತರಿಗೆ ಉತ್ತಮವಾಗಿರುವ ಇನ್ಶೂರೆನ್ಸ್ ಯೋಜನೆ ತರಬೇಕು. ಕೆಎಮ್ಎಫ್, ಡಿಸಿಸಿ ಬ್ಯಾಂಕ್ ಗಳ ಸುಧಾರಣೆ, ಎಪಿಎಂಸಿ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಜೆಡಿಎಸ್‍ ಉಪನಾಯಕ ಬಂಡೆಪ್ಪ ಕಾಶೆಂಪೂರ್ ಮಾತನಾಡಿದರು

ಪ್ರಸ್ತುತ ಕುರಿ, ಮೇಕೆಗಳ ಸಾವಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತ ವೈಜ್ಞಾನಿಕವಾಗಿಲ್ಲ. ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು. ಕುರಿ, ಮೇಕೆ ಸಾಕಾಣಿಕೆದಾರರಿಗೆ ಪ್ರೋತ್ಸಾಹ ನೀಡಬೇಕು. ಸರ್ಕಾರದಿಂದ ಕುರಿ, ಮೇಕೆಗಳಿಗೆ ಇನ್ಶೂರೆನ್ಸ್ ಯೋಜನೆಗಳನ್ನು ರೂಪಿಸಬೇಕು. ಅವರಿಗೆ ಮನೆಗಳನ್ನು ನಿರ್ಮಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕು ಎಂದರು.

ಕೃಷಿ, ಶಿಕ್ಷಣ, ಆರೋಗ್ಯ ವ್ಯವಸ್ಥೆಯ ಸುಧಾರಣೆಗೆ ಹೆಚ್ಚಿನ ಆದ್ಯತೆ : ಪ್ರಸ್ತುತ 1 ರಿಂದ 8ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲಾಗುತ್ತಿದೆ. ಆದರೆ, ಅದೇ ಶಾಲಾ ಕಾಂಪೌಂಡ್ ಗಳೊಳಗೆ 09, 10ನೇ ತರಗತಿ ಮಕ್ಕಳಿಗೆ ನೀಡುತ್ತಿಲ್ಲ. ಇದರಿಂದ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡುತ್ತದೆ. 09 ಮತ್ತು 10ನೇ ತರಗತಿಯ ಮಕ್ಕಳಿಗೂ ಈ ಯೋಜನೆಯನ್ನು ವಿಸ್ತರಿಸುವ ಕೆಲಸ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಕ್ಷೇತ್ರದ ಸುಧಾರಣೆಗೆ ಸರ್ಕಾರ ಆದ್ಯತೆ ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಸ್ಪೆಷಲ್​, ಸೂಪರ್ ಸ್ಪೆಷಲ್​ ಆಸ್ಪತ್ರೆಗಳನ್ನು ಸರ್ಕಾರದಿಂದ ನಿರ್ಮಿಸಬೇಕು. ಅವುಗಳ ಸುಧಾರಣೆಗೆ ಆದ್ಯತೆ ನೀಡಬೇಕು. ರಾಜ್ಯದ ರೋಗಿಗಳು ಹೊರರಾಜ್ಯಗಳಿಗೆ ಹೋಗುವ ಪರಿಸ್ಥಿತಿ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ ಅವರು ಆಶಾ, ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡಿ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್​ಗಳಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅವರಿಗೆ ನೀಡುತ್ತಿರುವ ಗೌರವಧನದಲ್ಲಿ ಅವರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ಅನೇಕ ವರ್ಷಗಳಿಂದ ಅವರು ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಸದನಕ್ಕೆ ತಿಳಿಸಿದರು.

ಅವರ ಗೌರವಧನ ಹೆಚ್ಚಿಸಬೇಕು ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಿಕೊಡುವ ಕೆಲಸ ಮಾಡಬೇಕು. ನಮ್ಮ ಕಲ್ಯಾಣ ಕರ್ನಾಟಕ ಭಾಗ ಕಲ್ಯಾಣವಿಲ್ಲದ ಭಾಗವಾಗಿದೆ. ಈ ಭಾಗಕ್ಕೆ ಅನ್ಯಾಯವಾಗುತ್ತಿದೆ. ಕೃಷಿ, ಶಿಕ್ಷಣ, ಆರೋಗ್ಯ ವ್ಯವಸ್ಥೆಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮುಖ್ಯಮಂತ್ರಿಗಳು ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಕಾರಂಜಾ ಡ್ಯಾಮ್​ನ ಹಿನ್ನೀರಿನಿಂದ ರೈತರ ಹೆಚ್ಚುವರಿ ಭೂಮಿ ಮುಳುಗಡೆಯಾಗುತ್ತಿದೆ. ಕಾರಂಜಾ ಸಂತ್ರಸ್ತ ರೈತರು ಅನೇಕ ವರ್ಷಗಳಿಂದ ಪರಿಹಾರಕ್ಕಾಗಿ ಅನೇಕ ಹೋರಾಟಗಳನ್ನು ಮಾಡಿಕೊಂಡು ಬರುತ್ತಿದ್ದಾರೆ. ಅವರಿಗೆ ನ್ಯಾಯಯುತವಾದ ಪರಿಹಾರ ಸಿಗುತ್ತಿಲ್ಲ. ಕೂಡಲೇ ಅವರಿಗೆ ಪರಿಹಾರ ಒದಗಿಸಿಕೊಡುವ ಕೆಲಸ ಮಾಡಬೇಕು ಎಂದರು.

ಬೀದರ್​​ನ ಬಿಎಸ್ಎಸ್​ಕೆಗೆ ಅನುದಾನ ನೀಡಬೇಕು. ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಅನುಭವ ಮಂಟಪದ ಕೆಲಸವನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ನೌಕರರ ವೇತನವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸೆವೆಂತ್ ಪೇ ಕಮಿಷನ್ ಜಾರಿಗೊಳಿಸಬೇಕು. ಶಾಸಕರ ನಿಧಿಯನ್ನು 2 ರಿಂದ ನಾಲ್ಕು ಕೋಟಿ ರೂ.ಗೆ ಹೆಚ್ಚಿಸಬೇಕು ಎಂದು ತಿಳಿಸಿದರು.

ಒಟ್ಟಾರೆಯಾಗಿ 2019-20, 2020-21, 2021-22, 2022-23ನೇ ಬಜೆಟ್​ನಲ್ಲಿ ಘೋಷಿಸಿದಂತ ಪ್ರತಿಯೊಂದು ಯೋಜನೆಗಳು ಜಾರಿಗೊಳಿಸಬೇಕು. ಕೃಷಿ, ಶಿಕ್ಷಣ, ಆರೋಗ್ಯ, ನೀರಾವರಿ, ಪ್ರವಾಸೋದ್ಯಮ ಸೇರಿದಂತೆ ಪ್ರತಿಯೊಂದು ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿನೂತನ ಯೋಜನೆ, ಕಾರ್ಯಕ್ರಮಗಳನ್ನು ನೀಡುವ ಮೂಲಕ ಕಲ್ಯಾಣ ಕರ್ನಾಟಕ, ಕರ್ನಾಟಕದ ಅಭಿವೃದ್ಧಿಗೊಳಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಆಗ್ರಹಿಸಿದರು.

ಓದಿ: ನ್ಯಾಯಾಧೀಕರಣದ ತೀರ್ಪಿನಂತೆ ಕೇಂದ್ರದ ಗೆಜೆಟ್ ಅಧಿಸೂಚನೆಯಾದ ನಂತರ ಹನಿ ನೀರಾವರಿಗೆ ಕ್ರಮ : ಸಚಿವ ಕಾರಜೋಳ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.