ETV Bharat / state

ಎಂಆರ್​ಪಿಗಿಂತ ಹೆಚ್ಚಿನ ಬೆಲೆಗೆ ಮಾರಿದರೆ ಲೈಸನ್ಸ್ ರದ್ದು: ಬೆಂಗಳೂರು ಡಿ.ಸಿ ವಾರ್ನಿಂಗ್​ - ಕೋವಿಡ್-19 ನಿಯಂತ್ರಣ

ಲಾಕ್​ ಡೌನ್​ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳನ್ನು ಮೂಲ ಬೆಲೆಗಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡು ಬಂದರೆ ಅಂಗಡಿ ಮಾಲೀಕರ ಲೈಸನ್ಸ್​ ರದ್ದು ಮಾಡುವುದಾಗಿ ಬೆಂಗಳೂರು ನಗರ ಡಿಸಿ ಜಿ.ಎನ್​ ಶಿವಮೂರ್ತಿ ಖಡಕ್ ವಾರ್ನಿಂಗ್​ ನೀಡಿದ್ದಾರೆ.

DC G.N Shivamurth
ಜಿ.ಎನ್.ಶಿವಮೂರ್ತಿ
author img

By

Published : Apr 1, 2020, 10:48 AM IST

ಬೆಂಗಳೂರು: ಅಗತ್ಯ ವಸ್ತುಗಳನ್ನು ಮೂಲ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ (ವರ್ತಕರು) ಅಂಗಡಿ ಮಾಲೀಕರ ಲೈಸೆನ್ಸ್ ರದ್ದು ಪಡಿಸುವುದಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ

ಯಲಹಂಕ ಉಪನಗರದ ಅಂಬೇಡ್ಕರ್ ಭವನದಲ್ಲಿ ಯಲಹಂಕ ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್-19 ಹರಡುವಿಕೆ ನಿಯಂತ್ರಣ ಸಂಬಂಧ ಅಧಿಕಾರಿಗಳೊಂದಿಗೆ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ 21ದಿನಗಳ ಕಾಲ ಲಾಕ್ ಡೌನ್ ಘೋಷಿಸಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಅಂಗಡಿ ಮಾಲೀಕರು ದಿನಸಿ, ತರಕಾರಿ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳನ್ನು ಮೂಲ ಬೆಲೆಗಿಂತ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದಾರೆಂದು ದೂರುಗಳು ಬರುತ್ತಿವೆ. ಹೀಗಾಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಕೇಸು ದಾಖಲಿಸಿ ಲೈಸೆನ್ಸ್ ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂಬ್ಯುಲೆನ್ಸ್ ಡ್ರೈವರ್​ಗಳ ಮನವೊಲಿಕೆ: ಆರೋಗ್ಯ ಇಲಾಖೆಯ 104 ಹಾಗೂ 108 ಡ್ರೈವರ್​ಗಳು ಕೋವಿಡ್ ಭೀತಿಯಿಂದ ಕರ್ತವ್ಯಕ್ಕೆ ಹಾಜರಾಗಲು ಹಿಂದೇಟು ಹಾಕುತ್ತಿದ್ದರು. ಅವರ ಏಜೆನ್ಸಿಗಳೊಂದಿಗೆ ಮಾತುಕತೆ ನಡೆಸಿ ಚಾಲಕರ ಮನವೊಲಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಸಿ.ಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ಇಂದು ಯಲಹಂಕ ತಾಲೂಕು ವ್ಯಾಪ್ತಿಯ ಆರೋಗ್ಯ ಅಧಿಕಾರಿಗಳು ಕಂದಾಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಪಿಡಿಓಗಳು ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೋವಿಡ್-19 ಸೋಂಕು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆ ನಡೆಸಿ, ಜನರಿಗೆ ಅಗತ್ಯ ವಸ್ತುಗಳನ್ನ ತಲುಪಿಸಲು ನಿರ್ಧರಿಲಾಗಿದೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.