ETV Bharat / state

ಮತದಾರರ ಮಾಹಿತಿ ಕಳವು ಆರೋಪದಲ್ಲಿ ಅಮಾನತು: ಹೈಕೋರ್ಟ್ ಮೆಟ್ಟಿಲೇರಿದ ಜಿಲ್ಲಾಧಿಕಾರಿ - ಹೈಕೋರ್ಟ್ ನೋಟಿಸ್

ತಮ್ಮನ್ನು ಸೇವೆಯಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದು ಕೋರಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

High Court
ಹೈಕೋರ್ಟ್
author img

By

Published : Dec 7, 2022, 7:15 AM IST

Updated : Dec 7, 2022, 7:29 AM IST

ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ದುರುಪಯೋಗ ಪ್ರಕರಣ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಅಮಾನತುಪಡಿಸಿರುವ ವಿಚಾರ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ತಮ್ಮನ್ನು ಸೇವೆಯಿಂದ ಅಮಾನತುಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದು ಕೋರಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ನರೇಂದರ್ ಅವರ ನೇತೃತ್ವದ ವಿಭಾಗೀಯ ಪೀಠ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ, ಪ್ರಕರಣ ಸಂಬಂಧ ಮುಂದುವರಿಯದಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ ವಿಚಾರಣೆಯನ್ನು ಬುಧವಾರಕ್ಕೆ (ಡಿ.7) ಮುಂದೂಡಿದೆ.

ಪ್ರಕರಣಕ್ಕೂ ಅರ್ಜಿದಾರರಿಗೂ ಯಾವುದೇ ಸಂಬಂಧವಿಲ್ಲ. ನಗರದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಆಧಾರ್ ಕಾರ್ಡ್ ಜೋಡಣೆ ಕುರಿತು ಅರಿವು ಮೂಡಿಸುವುದು, ಮತದಾರರ ದತ್ತಾಂಶ ಪರಿಶೀಲಿಸುವುದು ಸೇರಿದಂತೆ ವಿವಿಧ ಚಟುವಟಿಕೆ ನಡೆಸಲು ಚಿಲುಮೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ಗೆ ಅನುಮತಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತರು 2022ರ ಆ.20ರಂದು ಆದೇಶಿಸಿದ್ದರು. ಆದರೆ, ಅರಿವು ಮೂಡಿಸುವ ಸೋಗಿನಲ್ಲಿ ಮತದಾರರ ದತ್ತಾಂಶ ಸಂಗ್ರಹಿಸವ ಮೂಲಕ ಅಕ್ರಮ ಎಸಗಿದ ಆರೋಪದ ಮೇಲೆ ಚಿಲುಮೆಗೆ ನೀಡಿದ ಅನುಮತಿಯನ್ನು 2022ರ ನ.2ರಂದು ರದ್ದುಪಡಿಸಲಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಆದರೆ, ಕೇಂದ್ರ ಚುನಾವಣಾ ಆಯೋಗವು 2022ರ ನ.25ರಂದು ತಮ್ಮನ್ನು ಸೇವೆಯಿಂದ ಅಮಾನತುಪಡಿಸಿ 2022ರ ನ.26ರಂದು ರಾಜ್ಯ ಸರ್ಕಾರ ಆದೇಶಿಸಿದೆ. ಆದೇಶ ಹೊರಡಿಸುವ ಮುನ್ನ ಸರ್ಕಾರ ಲಭ್ಯವಿರುವ ದಾಖಲೆ ಪರಿಶೀಲಿಸಿಲ್ಲ. ತಮಗೆ ಅವಕಾಶ ನೀಡಿ ಯಾವುದೇ ವಿವರಣೆ ಪಡೆದಿಲ್ಲ. ತಮ್ಮ ವಿರುದ್ಧದ ಆರೋಪಗಳು ದುರ್ನಡತೆಗೆ ಸಂಬಂಧಿಸಿದ ಆರೋಪವಲ್ಲ ಎಂಬುದನ್ನು ಪರಿಗಣಿಸುವಲ್ಲಿ ಸರ್ಕಾರ ವಿಫಲವಾಗಿದೆ. ಅಮಾನತು ಆದೇಶಕ್ಕೆ ತಡೆ ನೀಡಲು ಡಿ.1ರಂದು ನ್ಯಾಯಾಧೀಕರಣ ನಿರಾಕರಿಸಿದೆ. ಆದ್ದರಿಂದ ಸರ್ಕಾರದ ಆದೇಶದ ಅನ್ವಯ ಮುಂದಿನ ಯಾವುದೇ ಪ್ರಕ್ರಿಯೆ ಕೈಗೊಳ್ಳದಂತೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚಿಲುಮೆ ಕೇಸ್: ಮತ್ತೋರ್ವ ಆರೋಪಿ ಬಂಧನ.. ಬಂಧಿತರ‌ ಸಂಖ್ಯೆ 12ಕ್ಕೆ ಏರಿಕೆ

Last Updated : Dec 7, 2022, 7:29 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.