ಬೆಂಗಳೂರು: ಕಟ್ಟಡ ಕಾರ್ಮಿಕರಿಬ್ಬರ ಮೇಲೆ ಸೈಜುಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ಕಲ್ಯಾಣನಗರದ ಸಹದೇವ (27) ಹಾಗೂ ದಂಡಪಾನಿ (29) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಈ ಕೊಲೆಗಳು ನಡೆದಿದ್ದು, ಕೊಳೆತ ಸ್ಥಿತಿಯಲ್ಲಿದ್ದ ಶವಗಳನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೊತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.