ETV Bharat / state

ಬೆಳೆದ ಉತ್ಪನ್ನ ಮಾರಾಟದ ಕೌಶಲ್ಯತೆ ರೈತರು ಬೆಳೆಸಿಕೊಳ್ಳಬೇಕು: ವಿಶ್ರಾಂತ ಕುಲಪತಿ ಚಂಗಪ್ಪ - ಕೃಷಿ ವಿಶ್ವವಿದ್ಯಾಲಯ ಧಾರವಾಡ

ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳದಲ್ಲಿ ಮಂಡ್ಯ ತುಮಕೂರು ಜಿಲ್ಲಾ ಮಟ್ಟದ ಪ್ರಗತಿಪರ ರೈತ ರೈತ ಮಹಿಳಾ ಪ್ರಶಸ್ತಿಗಳು, ಹಾಸನ ಮಂಡ್ಯ ತುಮಕೂರು ಜಿಲ್ಲೆಗಳ ತಾಲೂಕು ಮಟ್ಟದ ಅತ್ಯುತ್ತಮ ಯುವರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳನ್ನು ಪುರಷ್ಕೃತರಿಗೆ ವಿತರಿಸಲಾಯಿತು.

Award distribution to farmers
ಕೃಷಿ ಮೇಳದಲ್ಲಿ ಪ್ರಗತಿಪರ ರೈತರಿಗೆ ಪ್ರಶಸ್ತಿ ವಿತರಿಸಲಾಯಿತು.
author img

By ETV Bharat Karnataka Team

Published : Nov 19, 2023, 10:48 PM IST

ಬೆಂಗಳೂರು: ರೈತರು ಕೃಷಿಯಲ್ಲಿ ಯಶಸ್ವಿಯಾಗಬೇಕಾದರೆ ತಾವು ಬೆಳೆಯುವ ಬೆಳೆಗಳ ಖರ್ಚು ವೆಚ್ಚಗಳತ್ತ ಹೆಚ್ಚು ಗಮನ ಹರಿಸಬೇಕು. ಆಗ ಮಾತ್ರ ರೈತರು ಅರ್ಥಿಕವಾಗಿ ಸದೃಢವಾಗಲು ಸಾಧ್ಯ. ಕೃಷಿಕರು ಬೆಳೆದ ಉತ್ಪನ್ನಗಳನ್ನು ತಾವೇ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಕೌಶಲ್ಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕೃಷಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪಿ.ಜಿ. ಚಂಗಪ್ಪ ಹೇಳಿದರು.

ಜಿಕೆವಿಕೆಯಲ್ಲಿ ನಡೆದ ಕೃಷಿ ಮೇಳ-2023 ರ ಮಂಡ್ಯ ಮತ್ತು ತುಮಕೂರು ಜಿಲ್ಲಾ ಮಟ್ಟದ ಪ್ರಗತಿಪರ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳು ಮತ್ತು ಹಾಸನ ಮಂಡ್ಯ ಮತ್ತು ತುಮಕೂರು ಜಿಲ್ಲೆಗಳ ತಾಲೂಕು ಮಟ್ಟದ ಅತ್ಯುತ್ತಮ ಯುವರೈತ ಹಾಗೂ ರೈತ ಮಹಿಳಾ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

Award distribution to farmers
ಕೃಷಿ ಮೇಳದಲ್ಲಿ ಪ್ರಗತಿಪರ ರೈತರಿಗೆ ಪ್ರಶಸ್ತಿ ವಿತರಿಸಲಾಯಿತು

ಕೃಷಿ ವಲಯಕ್ಕೆ ಬೇಡಿಕೆ: ಮುಂದಿನ ದಿನಗಳಲ್ಲಿ ಕೃಷಿ ವಲಯಕ್ಕೆ ಬೇಡಿಕೆ ಹೆಚ್ಚಾಗಲಿದೆ. ಈ ನಿಟ್ಟಿನಲ್ಲಿ ರೈತರು ಹೆಮ್ಮೆಯಿಂದ ಕೃಷಿಯನ್ನು ಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ರೈತರು ಇತರರೊಂದಿಗೆ ಸ್ಪರ್ಧೆಯನ್ನು ಎದುರಿಸಲು ಸಂಘಟಿತರಾಗಬೇಕು. ಆದರೆ ಇಂದಿನ ದಿನಗಳಲ್ಲಿ ಕೆಲವೊಮ್ಮೆ ತಾವು ಬೆಳೆದ ಬೆಳೆಗೆ ಬೆಲೆ ಸಿಗದೇ ನಷ್ಟ ಅನುಭವಿಸಿದ್ದು ಉಂಟು. ಇದರಿಂದಾಗಿ ಬೆಳೆಗಾರರ ಸಂಘ, ಬೆಳಗಾರರ ಸಂಸ್ಥೆ ಮತ್ತು ಸ್ವ ಸಹಾಯ ಸಂಘ, ಸಹಕಾರಿ ಸಂಘಗಳ ಮೂಲಕ ಸಂಘಟಿತರಾಗಿ ಮಾರಾಟ ಮಾಡಲು ದೃಢವಾದ ಹೆಜ್ಜೆ ಇಡುವುದು ಇಂದಿನ ಬದಲಾಗುತ್ತಿರುವ ದಿನಗಳಲ್ಲಿ ಅನಿವಾರ್ಯವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರೈತರಲ್ಲಿ ಆರೋಗ್ಯದ ಕಾಳಜಿ ಅಗತ್ಯ: ಕೃಷಿ ವಿಶ್ವವಿದ್ಯಾಲಯ ಧಾರವಾಡದ ವಿಸ್ತರಣಾ ನಿರ್ದೇಶಕ ಎಸ್.ಎಸ್ ಅಂಗಡಿ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ವಿವಿಧ ಬೆಳೆಗಳ ದೇಸಿಯ ತಳಿಗಳನ್ನು ಸಂರಕ್ಷಣೆ ಮಾಡುವುದು ಇಂದು ಅತ್ಯಗತ್ಯ. ರೈತರು ಬೆಳೆ ಉತ್ಪಾದನೆ ಜೊತೆಗೆ ಆರೋಗ್ಯದ ಕಡೆಯೂ ಹೆಚ್ಚು ಗಮನ ನೀಡಬೇಕು. ಸಾವಯವ ಕೃಷಿ ಪದ್ಧತಿ ಅಳವಡಿಕೆಯಿಂದ ಹವಾಮಾನ ವೈಪರೀತ್ಯಗಳನ್ನು ಯಶಸ್ವಿಯಾಗಿ ಎದುರಿಸಲು ಸಾಧ್ಯ ಎಂದು ಸಲಹೆ ನೀಡಿದರು.

Award distribution to farmers
ಬೆಂಗಳೂರಿನ ಕೃಷಿ ಮೇಳದಲ್ಲಿ ಪ್ರಗತಿಪರ ರೈತರಿಗೆ ಪ್ರಶಸ್ತಿ ವಿತರಿಸಲಾಯಿತು.

ಕೃಷಿ ವಿಶ್ವವಿದ್ಯಾನಿಲಯಗಳು ಮಾರುಕಟ್ಟೆಯ ವಿಷಯಗಳ ಬಗ್ಗೆ ಹೆಚ್ಚು ಸಂಶೋಧನೆಗಳನ್ನು ಕೈಗೊಳ್ಳಬೇಕು. ಅವಶ್ಯಕ ವಿಸ್ತರಣಾ ಅಧಿಕಾರಿಗಳು ವಿವಿಧ ಬೆಳೆಗಳ ಆಧುನಿಕ ಬೇಸಾಯ ಕ್ರಮಗಳ ಜೊತೆಗೆ ಮಾರುಕಟ್ಟೆ, ಮೌಲ್ಯವರ್ಧನೆ, ಸಂಸ್ಕರಣೆ, ಕಡಿಮೆ ಖರ್ಚಿನ ಬೇಸಾಯ ಕ್ರಮಗಳ ಬಗ್ಗೆ ರೈತರಲ್ಲಿ ವಿವಿಧ ವಿಸ್ತರಣಾ ಪದ್ಧತಿಗಳ ಮೂಲಕ ಅರಿವು ಮೂಡಿಸುವುದು ಅವಶ್ಯಕ ಎಂದು ತಿಳಿಸಿದರು.

ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್. ವಿ. ಸುರೇಶ, ಜಿಕೆವಿಕೆ ಬೆಂಗಳೂರು ವಿಸ್ತರಣಾ ನಿರ್ದೇಶಕ ಡಾ. ವಿ.ಎಲ್. ಮಧುಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂಓದಿ:ನಾಲ್ಕು ದಿನಗಳ ಕೃಷಿ ಮೇಳ ಉದ್ಘಾಟಿಸಿದ ಸಿಎಂ: ಈ ಬಾರಿಯ ಆಕರ್ಷಣೆಗಳೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.