ಬೆಂಗಳೂರು: ನಿನ್ನೆ ಭಾರೀ ಮಳೆ ಸುರಿದು ಅವಾಂತರ ಸೃಷ್ಟಿಯಾದ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸುತ್ತಿದ್ದಾರೆ.
ಕಾವೇರಿ ನಿವಾಸದಲ್ಲಿ ಸಿಎಂ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಳೆಯಿಂದಾದ ಹಾನಿಯ ವರದಿ ಪಡೆಯಲಿದ್ದಾರೆ.
ಮಳೆಯಿಂದ ನಗರದ ಯಾವ ಪ್ರದೇಶಗಳಲ್ಲಿ ಹಾನಿಯಾಗಿದೆ?. ಹಾನಿಯ ಪ್ರಮಾಣ ಎಷ್ಟು? ಹಾಗೂ ಈವರೆಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆ.
ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಿದ್ದಾರೆ.