ಬೆಂಗಳೂರು: ಕೊರೊನಾ ವಾರಿಯರ್ ಆಗಿ ಕಂಟೈನ್ಮೆಂಟ್ ಝೋನ್ಗಳಲ್ಲಿ ಭದ್ರತೆಗೆಂದು ನಿಯೋಜನೆಯಾಗಿರುವ ಐವರು ಪೊಲೀಸರಿಗೆ ಮಾರಕ ಖಾಯಿಲೆಯ ಸೋಂಕು ಬಾಧಿಸಿದೆ.
ಕರ್ನಾಟಕ ರಾಜ್ಯ ಮೀಸಲು ಪಡೆಯ ಸಿಬ್ಬಂದಿ ನಗರದ ಬಹುತೇಕ ಕಡೆಗಳಲ್ಲಿ ಭದ್ರತೆಗೆಂದು ಕೆಎಸ್ಆರ್ಪಿ ಬಸ್ನಲ್ಲಿ ತೆರಳಿ ಅಧಿಕಾರಿಗಳು ಸೂಚಿಸಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿರಂತರವಾಗಿ ಕೊರೊನಾ ನಿರ್ಬಂಧಿತ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರಣ, ಸೋಂಕಿನ ಲಕ್ಷಣ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಈ ಕುರಿತ ಫಲಿತಾಂಶ ಬಂದಿದ್ದು ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತ ಐವರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಮತ್ತೊಂದೆಡೆ, ಇವರ ಜೊತೆಗಿನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಅಧಿಕಾರಿಗಳು ಪತ್ತೆ ಮಾಡುತ್ತಿದ್ದು, KSRPಯ ಎಲ್ಲಾ ಸಿಬ್ಬಂದಿಯಲ್ಲಿ ಆತಂಕ ಶುರುವಾಗಿದೆ. ಆರೋಗ್ಯಾಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳು ಐವರು ಪೊಲೀಸರ ಟ್ರಾವೆಲ್ ಹಿಸ್ಟರಿ ಕಲೆ ಹಾಕುತ್ತಿದ್ದಾರೆ.