ETV Bharat / state

ಯತ್ನಾಳ್​ ವಿರುದ್ಧ ಕ್ರಮಕ್ಕೆ ಬಿಜೆಪಿ ಶಾಸಕರ ಆಗ್ರಹ... ಮುಖ್ಯಮಂತ್ರಿ ಭೇಟಿ ಮಾಡಿ ದೂರು - ಬಸನಗೌಡ ಪಾಟೀಲ್​ ಯತ್ನಾಳ್​

ಸಂಜೆ ಮುಖ್ಯಮಂತ್ರಿ ಭೇಟಿ ಮಾಡಿರುವ ಆಡಳಿತರೂಢ ಬಿಜೆಪಿಯ 50ಕ್ಕೂ ಹೆಚ್ಚು ಶಾಸಕರು, ಬಸನಗೌಡ ಪಾಟೀಲ್​ ಯತ್ನಾಳ್​ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

BJP MLA
BJP MLA
author img

By

Published : Mar 22, 2021, 11:53 PM IST

ಬೆಂಗಳೂರು: ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿತು. ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ವಿರುದ್ಧ ಕ್ರಮಕ್ಕೂ ಒತ್ತಾಯಿಸಿದೆ.

BJP MLA Team
ಮುಖ್ಯಮಂತ್ರಿ ಭೇಟಿ ಮಾಡಿದ ಬಿಜೆಪಿ ತಂಡ

ವಿಧಾನಸಭೆ ಅಧಿವೇಶನದ ನಂತರ‌‌ ರಾತ್ರಿ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಗೆ ಎಂ.ಪಿ ರೇಣುಕಾಚಾರ್ಯ, ಮಾಡಾಳು ವಿರೂಪಾಕ್ಷಪ್ಪ, ಹರತಾಳು ಹಾಲಪ್ಪ, ಎಂ.ಪಿ ಕುಮಾರಸ್ವಾಮಿ ಸೇರಿದಂತೆ 50ಕ್ಕೂ ಹೆಚ್ಚು ಶಾಸಕರು ಭೇಟಿ ನೀಡಿದರು. ಕ್ಷೇತ್ರಕ್ಕೆ ಅನುದಾನ ನೀಡಿಕೆ, ಅಭಿವೃದ್ಧಿ ಕಾರ್ಯಗಳು, ಶಾಸಕರ ಅನುದಾನ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಯಾವುದೇ ಕ್ಷೇತ್ರಕ್ಕೂ ಅನುದಾನ ಕೊರತೆ ಮಾಡಲ್ಲ, ಹಣಕಾಸು ಸ್ಥಿತಿ ನೋಡಿಕೊಂಡು ಹಂತ ಹಂತವಾಗಿ ಎಲ್ಲರಿಗೂ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಅಭಿವೃದ್ಧಿ ಯೋಜನೆಗಳಿಗೂ ಹಣ ನೀಡಲಾಗುತ್ತದೆ ಎಂದು ಶಾಸಕರಿಗೆ‌ ಸಿಎಂ ಅಭಯ ನೀಡಿದ್ದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ನಮ್ಮ ಮೇಲೆ ಯಾವುದೇ ರೇಪ್ ಕೇಸ್ ಇಲ್ಲ : ಕೋರ್ಟ್‌ಗೆ ಹೋಗಿದ್ದಕ್ಕೆ ಡಾ.ಕೆ ಸುಧಾಕರ್ ಸ್ಪಷ್ಟನೆ

ಯತ್ನಾಳ್ ವಿರುದ್ಧ ಕಿಡಿ: ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗಿನ ಮಾತುಕತೆ ವೇಳೆ ರೇಣುಕಾಚಾರ್ಯ ಸೇರಿದಂತೆ ಕೆಲ ಶಾಸಕರು ಯತ್ನಾಳ್ ವಿಷಯ ಪ್ರಸ್ತಾಪಿಸಿದ್ದಾರೆ. ಪದೇ ಪದೇ ಮುಖ್ಯಮಂತ್ರಿ ಕುಟುಂಬದ ವಿರುದ್ಧ ಹೇಳಿಕೆ ನೀಡುತ್ತಿದ್ದರೂ, ಕ್ರಮ ಕೈಗೊಳ್ಳದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ಗೆ ದೂರು ನೀಡಿ ಅವರನ್ನು ಹದ್ದುಬಸ್ತಿನಲ್ಲಿಡಬೇಕು ಎಂದು ಆಗ್ರಹಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ‌, ಯತ್ನಾಳ್ ಹೇಳಿಕೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ, ಪಕ್ಷ ಎಲ್ಲವನ್ನೂ ನೋಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.