ETV Bharat / state

ಬೆಂಗಳೂರು ನಗರಕ್ಕೆ ದಕ್ಷ ಸಾರಿಗೆ ವ್ಯವಸ್ಥೆ ಅಗತ್ಯವಿದೆ: ಹೈಕೋರ್ಟ್ - ಸಾರಿಗೆ ವ್ಯವಸ್ಥೆ

ಸಂಚಾರಿ ದಟ್ಟಣೆಯಿಂದಾಗಿ ಸಾರ್ವಜನಿಕ ಸಾರಿಗೆಯ ಅಲಭ್ಯತೆ ಉಂಟಾಗುತ್ತಿರುವುದೇ ಬೆಂಗಳೂರು ನಗರದಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರ ವಾಹನಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣ ಎಂದು ಹೈಕೋರ್ಟ್​ ಹೇಳಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Jun 8, 2023, 7:16 AM IST

ಬೆಂಗಳೂರು: ರಾಜಧಾನಿ ಬೆಂಗಳೂರು ನಗರಕ್ಕೆ ದಕ್ಷ ಮತ್ತು ಆರ್ಥಿಕ ಲಾಭದಾಯಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಳ್ಳಾರಿಯ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಲ್ಲಿ ಜಾರಿ ಮಾಡಲು ನಿರ್ದೇಶನ ನೀಡಬೇಕು ಎಂದು ಕೋರಿ ನಗರದ ಸಮರ್ಪಣಾ ಸಾಮಾಜಿಕ ಸಾಂಸ್ಕೃತಿಕ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಲ್ಲಿಸಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್ ಕಮಲ್ ಅವರಿದ್ದ ವಿಭಾಗಿಯ ಪೀಠ ಈ ಅಭಿಪ್ರಾಯ ಪಟ್ಟಿದೆ. ಹೆಚ್ಚಿನ ಪ್ರಮಾಣದ ನಾಗರಿಕರು ತಮ್ಮ ಸ್ವಂತ ವಾಹನಗಳಲ್ಲಿ ನಗರ ಪ್ರವೇಶ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟುವುದಕ್ಕಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆರ್ಥಿಕವಾಗಿ ಲಾಭದಾಯಕ ಮತ್ತು ದಕ್ಷ ಗೊಳಿಸಬೇಕು ಹೆಚ್ಚಿನ ಬಸ್ ಸೇವೆ ಲಭ್ಯವಿರುವಂತೆ ಮಾಡಬೇಕು.

ಜತೆಗೆ, ಬೆಂಗಳೂರು ನಗರ ಸಂಚಾರಿ ದಟ್ಟಣೆಯಿಂದ ಸಾರ್ವಜನಿಕ ಸಾರಿಗೆಯ ಅಲಭ್ಯತೆಯು ವಾಹನಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ. ಜತೆಗೆ ನಗರದ ರಸ್ತೆಗಳ ಅಗಲೀಕರಣ ಪ್ರಸ್ತುತ ಅತ್ಯಂತ ಅಗತ್ಯವಿದೆ ಎಂದು ಪೀಠ ಅಭಿಪ್ರಾಯ ಪಟ್ಟಿತು. ನಗರದ ರಸ್ತೆಗಳಲ್ಲಿ ದ್ವಿಚಕ್ರವಾಹನಗಳು ಕೆಲವೊಮ್ಮೆ ನಾಲ್ಕು ಚಕ್ರ ವಾಹನಗಳು ಸಹ ಏಕಮುಖ ರಸ್ತೆಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತವೆ. ಈ ವಿಚಾರದಲ್ಲಿ ನಾಗರಿಕರು ಸಹ ಸಮಾಜದ ಕರ್ತವ್ಯಕ್ಕೆ ಬದ್ಧರಾಗಿರಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಮೌಖಿಕವಾಗಿ ವಿವರಿಸಿದರು.

ಬಳ್ಳಾರಿಯ ರಸ್ತೆಗೆ ಸಂಬಂಧಿಸಿದಂತೆ ರಸ್ತೆ ಅಗಲವನ್ನು ವಿಸ್ತರಿಸುವ ಮೂಲಕ ಮಾತ್ರ ಕೆಲವು ಮಾರ್ಗಗಳಲ್ಲಿನ ಸಂಚಾರದಟ್ಟಣೆ ನಿಯಂತ್ರಿಸಬಹುದಾಗಿದೆ ಎಂದು ಪೀಠ ತಿಳಿಸಿತು. ಇದೇ ವೇಳೆ ಬಳ್ಳಾರಿ ರಸ್ತೆ ಅಗಲೀಕರಣಕ್ಕೆ ಅಗತ್ಯವಿರುವ ಸಲಹೆಗಳನ್ನು ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಟ್ಟು ವಿಚಾರಣೆಯನ್ನು ಮುಂದೂಡಿತು.

ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಎಚ್ಚರ ವಹಿಸಬೇಕು : ಸಾರ್ವಜನಿಕ ಹಣದಿಂದ ನಿರ್ಮಿಸುವ ಯಾವುದೇ ಯೋಜನೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಎಚ್ಚರಿಕೆ ವಹಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಕಳಪೆ ಗುಣಮಟ್ಟದ ಪೊಲೀಸ್ ವಸತಿ ಗೃಹಗಳ ನಿರ್ಮಾಣ ಮಾಡಿದ್ದ ಗುತ್ತಿಗೆದಾರರ ಭದ್ರತಾ ಠೇವಣಿ ಹಿಂದಿರುಗಿಸಲು ನಿರ್ದೇಶನ ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್​ ಆದೇಶಿಸಿದೆ.

ಮಂಡ್ಯ ಮತ್ತು ಚಾಮರಾಜನರದಲ್ಲಿ ಪೊಲೀಸ್ ವಸತಿ ಯೋಜನೆಯಡಿ ಕಳಪೆ ಗುಣಮಟ್ಟದ ಸಮುಚ್ಚಯ ನಿರ್ಮಾಣ ಮಾಡಿದ್ದ ಆರೋಪ ಹೊತ್ತಿರುವ ಪಿಜಿ ಶೆಟ್ಟಿ ಕನ್ಸಸ್ಟ್ರಕ್ಷನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಭದ್ರತಾ ಠೇವಣಿಗೆ ಬಿಡುಗಡೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಸಾರ್ವಜನಿಕ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಸರ್ಕಾರ ಎಚ್ಚರಿಕೆ ವಹಿಸಬೇಕು: ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.