ETV Bharat / state

ವೃದ್ಧೆಯ ಕೈಕಾಲು ಕಟ್ಟಿ ಮನೆ ದರೋಡೆ: ಒಬ್ಬ ಆರೋಪಿ ಬಂಧನ - ಡಿಸಿಪಿ ಎಸ್ ಗಿರೀಶ್

ರಾಜರಾಜೇಶ್ವರಿ ನಗರದ ವೃದ್ಧೆ ಮನೆಗೆ ನುಗ್ಗಿದ್ದ ಆರೋಪಿಗಳು ಆಕೆಯ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಮನೆ ದರೋಡೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

house robbery case
ಮನೆ ದರೋಡೆ ಪ್ರಕರಣ
author img

By ETV Bharat Karnataka Team

Published : Jan 18, 2024, 4:20 PM IST

ಬೆಂಗಳೂರು: ಹಾಡಹಗಲೇ ವೃದ್ಧೆಯ ಕೈ ಕಾಲು ಕಟ್ಟಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ರೌಡಿ ಕುಮಾರ ಅಲಿಯಾಸ್ ಲೊಡ್ಡೆ ಕುಮಾರ (30) ಎಂಬುವನನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದಾರೆ. ಜನವರಿ 9ರಂದು ರಾಜರಾಜೇಶ್ವರಿ ನಗರದ ಗೌರಮ್ಮ ಎಂಬುವವರ ಮನೆಗೆ ನುಗ್ಗಿದ್ದ ಆರೋಪಿಗಳ ತಂಡ, ಆಕೆಯ ಕೈಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ದರೋಡೆ ಮಾಡಿ ಪರಾರಿಯಾಗಿದ್ದರು.

ಜನವರಿ 9ರ ಸಂಜೆ ಮೊಮ್ಮಕ್ಕಳನ್ನು ಟ್ಯೂಷನ್‌ಗೆ ಬಿಟ್ಟು ಮನೆಗೆ ಬಂದಿದ್ದ ಗೌರಮ್ಮ ಮನೆಯ ಬಾಗಿಲು ಒಳಗೆ ಹೋಗುವಷ್ಟರಲ್ಲಿ ಬಂದಿದ್ದ ದರೋಡೆಕೋರರು, ಮನೆಯ ಬಾಗಿಲು ಲಾಕ್​ ಮಾಡಿ, ಆಕೆಯ ಕೈಕಾಲು ಕಟ್ಟಿ ಬಾಯಿಗೆ ಮಂಕಿ ಕ್ಯಾಪ್ ತುರುಕಿದ್ದರು. ಬಳಿಕ ಮನೆಯಲ್ಲಿದ್ದ 120 ಗ್ರಾಂ ಚಿನ್ನ, 100 ಗ್ರಾಂ ಬೆಳ್ಳಿ, 50 ಸಾವಿರ ನಗದು ದರೋಡೆ ಮಾಡಿ ಎಸ್ಕೇಪ್ ಆಗಿದ್ದರು.

ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಸದ್ಯ ಓರ್ವ ಆರೋಪಿಯನ್ನು ಬಂಧಿಸಿದ್ದು, ಆತನಿಂದ ಕದ್ದ ಮಾಲನ್ನ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗೆ ಸಾಥ್ ನೀಡಿದ್ದ ಇನ್ನಳಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದೆಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್ ಗಿರೀಶ್ ತಿಳಿಸಿದ್ದಾರೆ.

ಅಕ್ರಮ ಪಿಸ್ತೂಲ್‌,ಜೀವಂತ ಗುಂಡು ಮಾರಾಟ,ಆರೋಪಿಗಳ ಬಂಧನ:- ಬೆಂಗಳೂರಿನಲ್ಲಿ ಅಕ್ರಮ ಪಿಸ್ತೂಲ್‌ಗಳು ಮತ್ತು ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮಹಾರಾಷ್ಟ್ರ ಮೂಲದ ಇಬ್ಬರು ಆರೋಪಿಗಳನ್ನ ಸಿಸಿಬಿಯ ಸಂಘಟಿತ ಅಪರಾಧ ದಳ (ಪಶ್ಚಿಮ)ದ ಅಧಿಕಾರಿ ಹಾಗೂ ಸಿಬ್ಬಂದಿ ತಂಡ ಬಂಧಿಸಿದೆ. ರಾಹುಲ್ ಸತೀಶ್ ಮಾನೆ ಹಾಗೂ ಮಲಿಕ್ ಬಂಧಿತ ಆರೋಪಿಗಳು. ಬಂಧಿತರಿಂದ 2 ಕಂಟ್ರಿಮೇಡ್ ಪಿಸ್ತೂಲ್, 9 ಜೀವಂತ ಗುಂಡುಗಳು, ಒಂದು ಸ್ವಿಫ್ಟ್ ಡಿಸೈರ್ ಕಾರ್ ಸೇರಿ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜನವರಿ 14ರಂದು ಬೆಳಗ್ಗೆ ಸುಮಾರು 11-30ರ ಸುಮಾರಿಗೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳ ರಿಂಗ್ ರಸ್ತೆಯ ಕೆರೆ ಬಳಿ ಅಕ್ರಮ ಪಿಸ್ತೂಲ್‌ಗಳು ಮತ್ತು ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ದಾಳಿ ನಡೆಸಿದ ಸಿಸಿಬಿಯ ಸಂಘಟಿತ ಅಪರಾಧ ದಳ (ಪಶ್ಚಿಮ) ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂಓದಿ:ಚಿಕ್ಕೋಡಿ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.