ಬೆಂಗಳೂರು: ಡಿಜೆ ಹಳ್ಳಿ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸುತ್ತಿದ್ದಂತೆ ಆತನ ತಂದೆಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಮಾನವೀಯತೆ ಹಿನ್ನೆಲೆಯಲ್ಲಿ ಆರೋಪಿಗೆ ತನ್ನ ತಂದೆಯ ಅಂತಿಮ ದರ್ಶನಕ್ಕಾಗಿ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ.
ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆಸಿದ್ದ ಆರೋಪದಡಿ ಫರ್ಹಾನ್ ಎಂಬಾತನನ್ನು ಬಂಧಿಸಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಆರೋಪಿಯ ತಂದೆಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬಂಧಿತನನ್ನು ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಠಾಣೆಯಿಂದ ಡಿಜೆ ಹಳ್ಳಿಯ ಕುಬ್ಬ ಮಸೀದಿ ರಸ್ತೆಯಲ್ಲಿರುವ ಮನೆಗೆ ಹೋಗಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಬಳಿಕ ಆರೋಪಿಯನ್ನು ಪುನಃ ಠಾಣೆಗೆ ಕರೆತಂದಿದ್ದಾರೆ.