ETV Bharat / state

ಉದಯಪುರ ಹಂತಕರನ್ನು ಗಲ್ಲಿಗೇರಿಸಬೇಕು: ಎನ್. ರವಿಕುಮಾರ್ ಆಗ್ರಹ - ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಪಿಎಫ್‍ಐ, ಎಸ್‍ಡಿಪಿಐ ಮತ್ತಿತರ ಸಂಘಟನೆಗಳ 1600 ಜನರ ಮೇಲಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದರು. ಅವರ ಈ ದ್ವಿಮುಖ ನೀತಿಯನ್ನು ಬಿಜೆಪಿ ಖಂಡಿಸುತ್ತದೆ. ಬಿಗ್ ಬ್ರದರ್ ಡಿ.ಕೆ.ಶಿವಕುಮಾರ್ ಅವರಿಗೆ ಅಲ್ಪಸಂಖ್ಯಾತರ ಏಳಿಗೆ ಬೇಕಿಲ್ಲ. ಅವರ ಮತಗಳು ಮಾತ್ರ ಬೇಕಿವೆ ಎಂದು ರವಿಕುಮಾರ್ ಟೀಕಿಸಿದರು.

bangalore protest
ಉದಯಪುರ ಹಂತಕರನ್ನು ಗಲ್ಲಿಗೇರಿಸಬೇಕು: ಎನ್. ರವಿಕುಮಾರ್ ಆಗ್ರಹ
author img

By

Published : Jul 2, 2022, 10:52 PM IST

ಬೆಂಗಳೂರು: ಉದಯಪುರ ಹತ್ಯೆ ಖಂಡಿಸಿ ಕಾಂಗ್ರೆಸ್ ದೇಶದಲ್ಲಿ ಏಕೆ ಪ್ರತಿಭಟನೆ ಮಾಡಿಲ್ಲ ಎಂಬುದಕ್ಕೆ ಉತ್ತರಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದರು. ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್​, ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಬಹುತೇಕ ಸತ್ತು ಹೋಗಿದೆ. ಕೊಲೆಗಡುಕರನ್ನು ಕೂಡಲೇ ರಸ್ತೆ ಮಧ್ಯದಲ್ಲಿ ಗಲ್ಲಿಗೇರಿಸಬೇಕು. ಕೊಲೆಗಡುಕರು ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವ ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತ ಬಂಧುಗಳು ದೂರ ಸರಿದು, ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಕೋತಿನ್ಯಾಯ ರೀತಿಯಲ್ಲಿ ವರ್ತಿಸುವ ಕಾಂಗ್ರೆಸ್ ಪಕ್ಷದಿಂದ ಅಲ್ಪಸಂಖ್ಯಾತ ಬಂಧುಗಳು ದೂರ ಸರಿಯಬೇಕಿದೆ. ಮುಸ್ಲಿಂ ಬುದ್ಧಿಜೀವಿಗಳು ಮತ್ತು ಚಿಂತಕರು ಇಂಥ ಕೊಲೆಯನ್ನು ಖಂಡಿಸಬೇಕಿದೆ. ಹತ್ಯೆಗೆ ರಾಜಸ್ಥಾನದ ಕಾಂಗ್ರೆಸ್ ಸರ್ಕಾರವೇ ಹೊಣೆ ಹೊರಬೇಕು. ಬಟ್ಟೆ ಅಳತೆ ಕೊಡುವ ನೆಪದಲ್ಲಿ ಬಂದು ಕತ್ತನ್ನು ಕೊಯ್ದು 26 ಬಾರಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಹಂತಕರು ಪ್ರಧಾನಿಗೂ ಬೆದರಿಕೆ ಹಾಕಿದ್ದಾರೆ. ಇದರ ಕುರಿತು ತನಿಖೆ ಮಾಡಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಪಿಎಫ್‍ಐ, ಎಸ್‍ಡಿಪಿಐ ಮತ್ತಿತರ ಸಂಘಟನೆಗಳ 1600 ಜನರ ಮೇಲಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದರು. ಅವರ ಈ ದ್ವಿಮುಖ ನೀತಿಯನ್ನು ಬಿಜೆಪಿ ಖಂಡಿಸುತ್ತದೆ. ಬಿಗ್ ಬ್ರದರ್ ಡಿ.ಕೆ.ಶಿವಕುಮಾರ್ ಅವರಿಗೆ ಅಲ್ಪಸಂಖ್ಯಾತರ ಏಳಿಗೆ ಬೇಕಿಲ್ಲ. ಅವರ ಮತಗಳು ಮಾತ್ರ ಬೇಕಿವೆ ಎಂದು ಟೀಕಿಸಿದರು. ಕನ್ಹಯ್ಯಲಾಲ್ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಮತ್ತು ರಾಜಸ್ಥಾನದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಹದಗೆಟ್ಟ ಕಾರಣ ರಾಷ್ಟ್ರಪತಿ ಆಳ್ವಿಕೆ ವಿಧಿಸುವಂತೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಅಧ್ಯಕ್ಷ ಸೈಯದ್ ಸಲಾಂ ಆಗ್ರಹಿಸಿದರು. ಪ್ರತಿ ಜಿಲ್ಲೆ, ತಾಲೂಕು, ಮಂಡಲ ಮತ್ತು ಬೂತ್ ಮಟ್ಟದಲ್ಲಿ ಇದೇ ಮಾದರಿಯಲ್ಲಿ ಮೋರ್ಚಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಉದಯಪುರ ಟೈಲರ್ ಹತ್ಯೆ ಪ್ರಕರಣ.. ಕೋರ್ಟ್​ಗೆ ಬಂದ ಆರೋಪಿಗಳ ಮೇಲೆ ಹಲ್ಲೆ, ಬಟ್ಟೆ ಹರಿದು ಆಕ್ರೋಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.