ಬೆಂಗಳೂರು: ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಇನ್ನೆರಡು ಪರೀಕ್ಷೆಗಳು ಬಾಕಿ ಇದ್ದು, ಇಂದು ಕನ್ನಡ ಪರೀಕ್ಷೆ ನಡೆಯುತ್ತಿದೆ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಪತ್ರಿಕೆ ಹರಿದಾಡುತ್ತಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಪಿಯುಸಿ ಬೋರ್ಡ್ ಸ್ಪಷ್ಟನೆ ನೀಡಿದೆ.
ದ್ವೀತಿಯ ಪಿಯುಸಿ ಕನ್ನಡ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲವೆಂದು ಪಿಯುಸಿ ಬೋರ್ಡ್ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಪೇಪರ್ ಒರಿಜಿನಲ್ ಪೇಪರ್ ಅಲ್ಲ. ಅನಗತ್ಯವಾಗಿ ಗೊಂದಲ ಸೃಷ್ಟಿಸಲು ಇಂತಹ ಕೆಲಸ ಮಾಡಲಾಗಿದೆ.
ಪ್ರಶ್ನೆ ಪತ್ರಿಕೆ ಟ್ರಷರಿ ಭದ್ರತೆಯಿಂದ ಕೂಡಿದೆ. ಯಾವುದೇ ಟ್ರಷರಿಯಿಂದ ಪೇಪರ್ ಲೀಕ್ ಆಗಿಲ್ಲ. ಸೋಶಿಯಲ್ ಮೀಡಿಯಾದ ಮಾತು ನಂಬಬೇಡಿ ಅಂತ ಪಿಯುಸಿ ಬೋರ್ಡ್ ನಿರ್ದೇಶಕ ಜಾಫರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸುಳ್ಳು ಸುದ್ದಿ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆತಂಕ ಇಲ್ಲದೆ ಪರೀಕ್ಷೆ ಬರೆಯಲು ಮನವಿ ಮಾಡಿದ್ದಾರೆ.