ETV Bharat / state

ಬೆಂಗಳೂರು-ಪುಣೆ ಹೈವೇ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಎಡಿಜಿಪಿ ಅಲೋಕ್​ ಕುಮಾರ್​ ಸೂಚನೆ ನೀಡಿದರು.

highway inspected by ADGP Alok Kumar
ಬೆಂಗಳೂರು-ಪುಣೆ ಹೈವೆ‌ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್
author img

By

Published : Aug 2, 2023, 4:10 PM IST

Updated : Aug 2, 2023, 4:57 PM IST

ಬೆಂಗಳೂರು-ಪುಣೆ ಹೈವೆ‌ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು/ತುಮಕೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ಸುರಕ್ಷತೆಗೆ ಹಾಗೂ ಮುಂಜಾಗ್ರತ ಕ್ರಮ ಕೈಗೊಂಡಿದ್ದ ಪೊಲೀಸ್ ಇಲಾಖೆ ಇದೀಗ ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅಪಘಾತ ಹೆಚ್ಚಾದ ಹಿನ್ನೆಲೆಯಲ್ಲಿ ಸಂಚಾರ ಹಾಗೂ‌ ಸುರಕ್ಷತಾ ಪ್ರಾಧಿಕಾರ ಎಡಿಜಿಪಿ ಅಲೋಕ್ ಕುಮಾರ್ ಖುದ್ದು ಸ್ಥಳ ಪರಿಶೀಲಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಿದ್ದರು. ಇದೀಗ ಬೆಂಗಳೂರು-ಪುಣೆ ಹೈವೇಯಲ್ಲಿ ಅಧಿಕವಾಗುತ್ತಿರುವ ಅಪಘಾತಗಳನ್ನ ನಿಯಂತ್ರಣಕ್ಕೆ ತರಲು ಅಲೋಕ್ ಕುಮಾರ್ ಅವರು ಅಡಕಮಾರನಹಳ್ಳಿ ಬಳಿ ಹೆದ್ದಾರಿ ಪರಿಶೀಲಿಸಿದರು. ಟೋಲ್ ಯಾವ ರೀತಿ ನಿರ್ವಹಿಸಲಾಗುತ್ತಿದೆ‌? ಕ್ಯಾಮರಾ ಕಾರ್ಯ ನಿರ್ವಹಿಸುತ್ತಿದೆಯಾ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.

ಬಳಿಕ‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇತ್ತೀಚೆಗೆ ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಅಪಘಾತ ಆಗುತ್ತಿವೆ. ಕಳೆದ ತಿಂಗಳಲ್ಲಿ 49 ಅಪಘಾತಗಳು ಸಂಭವಿಸುವ ಮೂಲಕ ರಾಜ್ಯದಲ್ಲಿ ಎರಡನೇ ಸ್ಥಾನ ಬಂದಿದೆ. ಅಪಘಾತ ಹೆಚ್ಚಳಕ್ಕೆ ಏನು ಕಾರಣ ಎಂಬುದಕ್ಕೆ ಪರಿಶೀಲಿಸಲು ಸ್ಥಳಕ್ಕೆ ಬಂದಿದ್ದೇನೆ. ನೆಲಮಂಗಲ-ತುಮಕೂರು ಮಧ್ಯೆ ಸಾಕಷ್ಟು ಅಪಘಾತಗಳು ಆಗುತ್ತಿವೆ. ಹೈ ರೆಸೊಲ್ಯೂಷನ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅವು ಹೇಗೆ ಕಾರ್ಯ ನಿರ್ವಹಿಸಲಾಗುತ್ತೆ ಅಂತಾ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಒಂದಷ್ಟು ಸಮಸ್ಯೆಗಳಿವೆ ಅದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲಲ್ಲಿ ರ‍್ಯಾಂಪ್​ಗಳನ್ನು ಅಳವಡಿಸುವುದಕ್ಕೆ ಸೂಚನೆ ನೀಡಿದ್ದೇನೆ. ಮೇಲುಸೇತುವೆ ಬಳಿ 50 ಮೀಟರ್ ಅಂತರದಲ್ಲಿ ಸೂಚನಾ‌ಫಲಕ ಹಾಕಲು ತಿಳಿಸಲಾಗಿದೆ. ಅದರ ಟೋಲ್​ಗಳ ಬಳಿ ಏನು ಸಮಸ್ಯೆ ಆಗ್ತಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.

ತುಮಕೂರು ಹೊರವಲಯದಲ್ಲೂ ಪರಿಶೀಲನೆ: ತುಮಕೂರು ಹೊರವಲಯದಲ್ಲಿ ಹಾದು ಹೋಗಿರುವ ಬೆಂಗಳೂರು-ಪುಣೆ ಮಾರ್ಗದ ನಡುವಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಾರ ಪ್ರಮಾಣದ ರಸ್ತೆ ಅಪಘಾತಗಳಲ್ಲಿ ಅನೇಕ ಮಂದಿ ಮೃತಪಟ್ಟಿದ್ದಾರೆ. ಕಳೆದ ಒಂದು ವರ್ಷದಲ್ಲಿ 750ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ಅಪಘಾತಗಳ ಸಂಖ್ಯೆಯನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಖುದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ರಸ್ತೆ ವೀಕ್ಷಿಸಿದರು.

ತುಮಕೂರು ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆಯ ಬಗ್ಗೆ ಸಾಕಷ್ಟು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಗೆ ಭೇಟಿ ನೀಡಿದರು. ಅಲ್ಲದೆ ಪೊಲೀಸರಿಗೆ ಮಾರ್ಗದರ್ಶನ ನೀಡಿದರು. ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರ ಬಳಿ ದಂಡ ವಿಧಿಸುವುದೇ ಪ್ರಮುಖ ಅಂಶವಾಗಬಾರದು. ಬದಲಾಗಿ ಅಪಘಾತ ಪ್ರಕರಣಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಪೊಲೀಸ್ ಅಧೀಕ್ಷಕ ರಾಹುಲ್‌ ಕುಮಾರ್ ಹಾಜರಿದ್ದರು.

ಇದನ್ನೂ ಓದಿ: ದ್ವಿ-ಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದ್ದು ಸರಿ ಇದೆ: ಅಲೋಕ್ ಕುಮಾರ್

Last Updated : Aug 2, 2023, 4:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.