ಬೆಂಗಳೂರು: ಸಿಲಿಕಾನ್ ಸಿಟಿಯ ಅಕಾಲಿಕ ಮಳೆಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಮತ್ತು ಪಾಲಿಯ ನಿರ್ಲಕ್ಷ್ಯದಿಂದಾಗಿ ಈ ಘಟನೆಯ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ತಿಲಕ್ ನಗರದ ಸಾಗರ್ ಅಪೋಲೊ ಆಸ್ಪತ್ರೆ ಬಳಿ ಘಟನೆ ನಡೆದಿದ್ದು, ವೆಂಕಟೇಶ್ (41) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಳೆ ಮತ್ತು ಗಾಳಿಗೆ ರಸ್ತೆ ಮೇಲೆ ವಿದ್ಯುತ್ ತಂತಿ ಮತ್ತು ಮರ ತುಂಡಾಗಿ ಬಿದ್ದಿದೆ. ಕೆಲಸ ಮುಗಿಸಿ ಮನೆ ಕಡೆ ಹೊರಟಿದ್ದ ವೆಂಕಟೇಶ್ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಖಾಸಗಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿ ವೆಂಕಟೇಶ್ ಸೇವೆ ಸಲ್ಲಿಸುತ್ತಿದ್ದರು. ಬಿಬಿಎಂಪಿ ಮತ್ತು ಬೆಸ್ಕಾಂ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿಯಾಗಿದ್ದು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಘಟನೆ ಕುರಿತು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.