ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು.
ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಡಿ.ಜಿ.ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
![high level meeting in CM BSY house](https://etvbharatimages.akamaized.net/etvbharat/prod-images/kn-bng-01-cm-meeting-script-7208080_17082020113109_1708f_1597644069_130.jpg)
ಗಲಭೆ ಪ್ರಕರಣ ಸಂಬಂಧ ಈವರೆಗೆ ಕೈಗೊಂಡಿರುವ ಕ್ರಮಗಳು, ಆರೋಪಿಗಳ ಬಂಧನ, ಘಟನೆಗೆ ಕಾರಣ, ಪ್ರೇರಣೆ, ಸಂಘಟನೆಗಳ ಪಾತ್ರ ಸೇರಿದಂತೆ ವಿಸ್ತೃತವಾದ ಚರ್ಚೆ ನಡೆಸಲಾಯಿತು. ಡಿಜೆ ಹಳ್ಳಿ ಪ್ರಕರಣ ಸಂಬಂಧ ಸಿಎಂ ಜೊತೆಗಿನ ಸಭೆಗೂ ಮುನ್ನ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಿದರು. ಆರ್. ಟಿ. ನಗರದ ಖಾಸಗಿ ನಿವಾಸದಲ್ಲಿ ಸಭೆ ನಡೆಸಿದ್ದು, ಗೃಹ ಇಲಾಖೆ ಎಸಿಎಸ್ ರಜನೀಶ್ ಗೋಯೆಲ್, ಡಿಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ಅನುಚೇತ್ ಭಾಗಿಯಾಗಿದ್ದರು.