ETV Bharat / state

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಹೆಚ್ಚುವರಿ 600 ಬಸ್​ಗಳ ವ್ಯವಸ್ಥೆ - ಪ್ರಯಾಣಿಕ

ಯುಗಾದಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗಾಗಿ ಕೆಎಸ್ಆರ್​ಟಿಸಿಯಿಂದ 600 ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಕೆಂಪೇಗೌಡ ಬಸ್ ನಿಲ್ದಾಣ
author img

By

Published : Apr 3, 2019, 12:08 PM IST

ಬೆಂಗಳೂರು: ಏಪ್ರಿಲ್ 6ರಂದು ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್ಆರ್​ಟಿಸಿಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಏ. 5 ಮತ್ತು 6ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 600 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಜೊತೆಗೆ ರಾಜ್ಯದ ಮತ್ತು ಅಂತರ್​ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಏ. 7ರಂದು ಬರುವ ಪ್ರಯಾಣಿಕರ ಅನುಕೂಲಕ್ಕೂ ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಕೆಂಪೇಗೌಡ ಬಸ್ ನಿಲ್ದಾಣ

ಎಲ್ಲಿಂದ-ಎಲ್ಲಿಗೆ ವಿಶೇಷ ಬಸ್ ವ್ಯವಸ್ಥೆ?

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗವಾಗಿ ಬಸ್​ಗಳ ವ್ಯವಸ್ಥೆ ಇದೆ.

ತಮಿಳುನಾಡು ಮತ್ತು ಆಂಧ್ರ ಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಂಬತ್ತೂರ್​, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತಿದೆ.

ಬೆಂಗಳೂರು ನಗರದ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನು ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.