ಬೆಂಗಳೂರು: ಉದ್ಯಾನನಗರಿಯಲ್ಲಿ ಬೆಳಗ್ಗೆಯಿಂದಲೇ ಜಿಟಿ-ಜಿಟಿ ಮಳೆಯಾಗುತ್ತಿದ್ದು, ಈ ಭಾನುವಾರದ ವಾತಾವರಣ ಕೂಲ್ ಕೂಲ್ ಆಗಿದೆ.
ಮಳೆರಾಯ ಜೋರಾಗಿಯೂ ಬರದೇ, ಇತ್ತ ಸಂಪೂರ್ಣ ನಿಲ್ಲದೆ ಸಂಡೇ ಪ್ಲಾನ್ ಮಾಡಿಕೊಂಡವರಿಗೆ ಅಡ್ಡಿಯಾಗಿದ್ದಾನೆ. ನಗರದ ಮೆಜೆಸ್ಟಿಕ್, ಕಾಟನ್ ಪೇಟೆ, ಕೆಆರ್ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಶಿವಾನಂದ ಸರ್ಕಲ್ ಸೇರಿದಂತೆ ಸುತ್ತಮುತ್ತ ಜಿಟಿ-ಜಿಟಿ ಮಳೆಯಾಗುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 45-50 ಕಿ.ಮೀ.ಗೂ ಹೆಚ್ಚು ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.