ETV Bharat / state

25ನೇ ಬೆಂಗಳೂರು ತಂತ್ರಜ್ಞಾನ ಸಮಾವೇಶ: ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತಾ ನೀತಿ ಬಿಡುಗಡೆ

25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಘೋಷಿಸಿದೆ.

bangalore-tech-summit-new-policy-release
25ನೇ ಬೆಂಗಳೂರು ತಂತ್ರಜ್ಞಾನ ಸಮಾವೇಶ
author img

By

Published : Nov 16, 2022, 8:38 PM IST

ಬೆಂಗಳೂರು: ರಾಜ್ಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ವ್ಯವಸ್ಥಿತವಾಗಿ ಬೆಳೆಸಲು 'ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನ'ವನ್ನು ಆರಂಭಿಸಲಾಗುವುದು ಎಂದು ರಾಜ್ಯ ಸರಕಾರ ಬುಧವಾರ ಆರಂಭವಾದ 25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಹೇಳಿದೆ. ಇದರ ಜೊತೆಗೆ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತಾ ನೀತಿಯಲ್ಲಿ ಇದರಲ್ಲಿ ಹೇಳಲಾಗಿದೆ.

ನೀತಿಯಲ್ಲಿರುವ ಗುರಿಗಳನ್ನು ತಲುಪಲು ಸರಕಾರದ ಪ್ರತಿಯೊಂದು ಇಲಾಖೆಯೂ ಸಂಶೋಧನೆ ಮತ್ತು ಅಭಿವೃದ್ಧಿಗೆ ವರ್ಷದಿಂದ ವರ್ಷಕ್ಕೆ ಶೇಕಡಾ 0.1ರಷ್ಟು ಹಣವನ್ನು ಏರಿಸಲಿವೆ. ಈ ಮೂಲಕ ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರೀಯ ಜಿಡಿಪಿಯ ಶೇಕಡಾ 0.7ರಷ್ಟು ಮತ್ತು ರಾಜ್ಯ ಜಿಡಿಪಿಯ ಶೇಕಡಾ 2ರಿಂದ 3ರಷ್ಟು ಹಣವನ್ನು ಈ ಉದ್ದೇಶಕ್ಕೆ ಮೀಸಲಿಡುವಂಥ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ನೀತಿಯಲ್ಲಿ ಹೇಳಲಾಗಿದೆ.

ಈ ನೀತಿಯಿಂದ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ಆರಂಭಿಕ ಹಂತದ ಸಂಶೋಧಕರಿಗೆ ಪ್ರೋತ್ಸಾಹ ದೊರೆಯಲಿದೆ. ಅಲ್ಲದೇ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಾರ್ವಜನಿಕ ನಿಧಿ ಇರುವ 'ಮುಕ್ತ ವಿಜ್ಞಾನ ಮತ್ತು ಸಂಶೋಧನೆ' ಉಪಕ್ರಮ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ರಾಜ್ಯದ ಹಲವೆಡೆಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಪಾರ್ಕ್‌ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಇದರಲ್ಲಿ ವಿವರಿಸಲಾಗಿದೆ.

25ನೇ ಬೆಂಗಳೂರು ತಂತ್ರಜ್ಞಾನ ಸಮಾವೇಶ

ಬೆಂಗಳೂರಿನಿಂದ ಆಚೆ ತಮ್ಮ ಆರ್​ ಅಂಡ್​​​​​​​​​​​​ ಡಿ ಕೇಂದ್ರಗಳನ್ನು ಸ್ಥಾಪಿಸುವ ಕಂಪನಿಗಳಿಗೆ ವಿಶೇಷ ಪ್ರೋತ್ಸಾಹಕ ನೀತಿಯನ್ನು ರೂಪಿಸಲು ನೀತಿಯು ಶಿಫಾರಸು ಮಾಡಿದೆ. ಇದಕ್ಕಾಗಿ 'ಕರ್ನಾಟಕ ತಂತ್ರಜ್ಞಾನ ನಾವೀನ್ಯತೆ ಮತ್ತು ಉದ್ಯಮಶೀಲತೆ' ಎನ್ನುವ ವಿಶೇಷ ಪರಿಪೋಷಣಾ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ಸರಕಾರವು ತನ್ನ ಇಂಗಿತವ ವ್ಯಕ್ತಪಡಿಸಿದೆ.

ಸಂಶೋಧನೆಯ ಫಲಗಳು ಸಮಾಜದ ಎಲ್ಲ ವರ್ಗಗಳ ಜನರನ್ನೂ ತಲುಪಬೇಕು. ಇದಕ್ಕಾಗಿ ಒಂದು ಇ - ಪ್ಲಾಟ್‌ಫಾರಂ ಅಭಿವೃದ್ಧಿ ಪಡಿಸಲಾಗುವುದು. ಇದಕ್ಕಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳಲ್ಲಿ ಸಂಶೋಧನೆಗೆ ಉತ್ತೇಜನ ನೀಡಲಾಗುವುದು. ಹಾಗೆಯೇ, ಆದ್ಯತಾ ವಲಯಗಳಲ್ಲೂ ಸಾಮಾಜಿಕ ಪರಿವರ್ತನೆ ಉಂಟುಮಾಡಬಲ್ಲ ಸಂಶೋಧನೆಗಳಿಗೆ ಪ್ರೋತ್ಸಾಹ ಕೊಡಲಾಗುವುದು ಎಂದು ಇದರಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಎಲೆಕ್ಟ್ರಾನಿಕ್‌ ವಲಯದಲ್ಲಿ 36 ಸಾವಿರ ಕೋಟಿ ರೂ.ಗೂ ಹೆಚ್ಚು ಹೂಡಿಕೆ: ಸಚಿವ ಅಶ್ವತ್ಥನಾರಾಯಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.