ETV Bharat / state

ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆಗೆ ಎಕ್ಸ್​​ಪ್ರೆಷನ್ ಆಫ್ ಇಂಟ್ರಸ್ಟ್ ಜಾಗತಿಕ ಟೆಂಡರ್​ಗೆ ಆಹ್ವಾನ : ಡಿಸಿಎಂ ಡಿ ಕೆ ಶಿವಕುಮಾರ್ - ಬೆಂಗಳೂರಿನಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿ

ಚೀನಾ ಸಿಂಗಾಪುರ ಇಸ್ರೇಲ್ ಸೇರಿದಂತೆ ಹತ್ತಾರು ಕಂಪನಿಗಳು ಈಗಾಗಲೇ ತಮ್ಮ ವಿಚಾರ ತಿಳಿಸಿವೆ. ಈ ಕಂಪನಿಗಳಿಗೆ ಎಕ್ಸ್​​ಪ್ರೆಷನ್ ಆಫ್ ಇಂಟ್ರಸ್ಟ್ ಜಾಗತಿಕ ಟೆಂಡರ್​​ನಲ್ಲಿ ಭಾಗವಹಿಸಿ, ಇಡೀ ಯೋಜನೆ ಹೇಗೆ ಜಾರಿ ಮಾಡವುದೆಂಬುವುದನ್ನೂ ವಿವರಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ ಡಿಕೆಶಿ ಮಾಹಿತಿ ನೀಡಿದರು.

DCM DK Shivakumar spoke at the press conference.
ಡಿಸಿಎಂ ಡಿ ಕೆ ಶಿವಕುಮಾರ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
author img

By

Published : Aug 3, 2023, 4:09 PM IST

ನವದೆಹಲಿ/ಬೆಂಗಳೂರು:ಮಹಾನಗರ ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜತೆ ಚರ್ಚೆ ನಡೆಸಿದ್ದು, ಸುರಂಗ ರಸ್ತೆ, ಫ್ಲೈ ಓವರ್ ಅಥವಾ ಇತರೆ ಮಾದರಿ ಯೋಜನೆ ಜಾರಿಗಾಗಿ ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಡಿಕೆಶಿ ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ತಿಳಿಸಿದ್ದು, ಈಗಾಗಲೇ ಬಬಿಎಂಪಿ ಹಾಗೂ ಬಿಡಿಎ ಮೂಲಕ ಎಕ್ಸ್ ಪ್ರೆಷನ್ ಆಫ್ ಇಂಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆಯಲಾಗಿದೆ. ಟೆಂಡರ್ ಸಲ್ಲಿಕೆಗೆ ಆಗಸ್ಟ್ 8 ಕೊನೆ ದಿನವಾಗಿದೆ. ಬೆಂಗಳೂರು ಸಂಚಾರ ದಟ್ಟಣೆ ನಿವಾರಣೆ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ನಿನ್ನೆ ಭೇಟಿ ಮಾಡಿ ಚರ್ಚಿಸಿದ್ದೇನೆ.

ಬೆಂಗಳೂರಿನಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ಈ ರಸ್ತೆಗಳ ಮೂಲಕ ಬೆಂಗಳೂರಿಗೆ ಹೆಚ್ಚಿನ ವಾಹನಗಳು ಆಗಮಿಸಿ ಸಂಚಾರ ದಟ್ಟಣೆಗೆ ಕಾರಣವಾಗಿವೆ. ಈ ಸಂಚಾರ ದಟ್ಟಣೆ ನಿವಾರಣೆಗೆ ಕೇಂದ್ರ ಹೆದ್ದಾರಿ ಪ್ರಾಧಿಕಾರದ ಮೂಲಕ ಕ್ರಮ ಕೈಗೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವರ ಜತೆ ಚರ್ಚಿಸಿದ್ದೇನೆ ಎಂದರು.

ನಮ್ಮ ವಿಚಾರಕ್ಕೆ ನಿತಿನ್ ಗಡ್ಕರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅವರು ತಮ್ಮ ಸಲಹೆಯನ್ನು ನೀಡಿದ್ದಾರೆ. ಈಗಾಗಲೇ ಜುಲೈ 14ರಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿಯಿಂದ ಎಕ್ಸ್ ಪ್ರೆಷನ್ ಆಫ್ ಇಂಟ್ರಸ್ಟ್ ಮೂಲಕ ಜಾಗತಿಕ ಟೆಂಡರ್ ಕರೆದಿದ್ದೇವೆ.

ಆಗಸ್ಟ್ 8 ರಂದು ಕೊನೆ ದಿನವಾಗಿದೆ. ಸಂಚಾರ ದಟ್ಟಣೆ ನಿಯಂತ್ರಣ ಮಾಡಿ ಬೆಂಗಳೂರಿನ ಚಿತ್ರಣ ಬದಲಿಸಬೇಕಿದೆ. ದೆಹಲಿ, ಮುಂಬೈ ನಗರಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದರೂ, ಬೆಂಗಳೂರನ್ನು ಜಾಗತಿಕ ನಗರ ಎಂದು ಸ್ವೀಕರಿಸಿರುವ ಹಿನ್ನೆಲೆ ಕೇವಲ ಬೆಂಗಳೂರಿನ ಸಂಚಾರ ದಟ್ಟಣೆ ಬಗ್ಗೆ ಮಾತ್ರ ಹೆಚ್ಚಾಗಿ ಮಾತನಾಡುತ್ತಿದ್ದಾರೆ.

ಸಂಚಾರ ದಟ್ಟಣೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲು ಸಜ್ಜಾಗುತ್ತಿದ್ದು, ಈಗಾಗಲೇ ಚೀನಾ, ಸಿಂಗಾಪುರ, ಇಸ್ರೇಲ್ ಸೇರಿದಂತೆ ಹತ್ತಾರು ಕಂಪನಿಗಳು ಬಂದು ತಮ್ಮ ವಿಚಾರ ತಿಳಿಸಿವೆ. ಈ ಕಂಪನಿಗಳಿಗೆ ಈಗಾಗಲೇ ಎಕ್ಸ್​​ಪ್ರೆಷನ್ ಆಫ್ ಇ-ಟ್ರಸ್ಟ್ ಮೂಲಕ ಕರೆಯಲಾಗಿರುವ ಟೆಂಡರ್​​ನಲ್ಲಿ ಭಾಗವಹಿಸಿ, ಇಡೀ ಯೋಜನೆ ಹೇಗೆ ಜಾರಿ ಮಾಡಬಹುದು ಎಂದು ವಿವರಿಸುವಂತೆ ಸೂಚಿಸಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಡಿಎ ಪ್ರಕರಣಗಳ ಕುರಿತು ವಕೀಲರಿಂದ ಮಾಹಿತಿ: ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ವಕೀಲರ ಜತೆಗೂ ಚರ್ಚೆ ಮಾಡಲಾಗಿದೆ. ಎಷ್ಟು ಪ್ರಕರಣಗಳು ಬಾಕಿ ಉಳಿದಿವೆ, ಎಷ್ಟು ಪ್ರಕರಣ ದಾಖಲಾಗಿತ್ತು, ಎಷ್ಟು ಗೆಲ್ಲಲಾಗಿದೆ, ಎಷ್ಟು ಸೋತಿದ್ದೇವೆ ಎಂಬ ಮಾಹಿತಿ ಕೇಳಿದ್ದೇನೆ. ಇಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಬಹಳ ಮುಖ್ಯ. ಸರ್ಕಾರದ ಆಡಳಿತ ಯಂತ್ರ ಬಲಿಷ್ಠವಾಗಿರುವಂತೆ ನೋಡಿಕೊಳ್ಳುತ್ತೇವೆ. ಸದ್ಯ 350 ಪ್ರಕರಣ ನಡೆಯುತ್ತಿದೆ ಎಂಬ ಮಾಹಿತಿ ಇದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದು, ಅವರ ಕಾರ್ಯವೈಖರಿ ನೋಡಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

2019-2023 ರ ವರೆಗೆ ಬಿಬಿಎಂಪಿ ವ್ಯಾಪ್ತಿ ನಡೆದಿರುವ ಕಾಮಗಾರಿಗಳ ಬಗ್ಗೆ ಯಾವ ಕಾರಣಕ್ಕೆ ವರದಿ ಕೇಳಿದ್ದೀರಿ ಎಂಬ ಪ್ರಶ್ನೆಗೆ ಬಿಬಿಎಂಪಿ ಕಾಮಗಾರಿಗಳ ಅಕ್ರಮದ ಬಗ್ಗೆ ಕೆಂಪಣ್ಣ ಅವರು ಪತ್ರ ಬರೆದಿದ್ದರು. ಸದನದ ಒಳಗೆ ಬಿಜೆಪಿ ಶಾಸಕರು ಅನೇಕ ಹೇಳಿಕೆ ನೀಡಿದ್ದರು. ಲೋಕಾಯುಕ್ತ ಸಂಸ್ಥೆ ಕೂಡ ಕೆಲವು ಕಾಮಗಾರಿ ವಿಚಾರವಾಗಿ ತನ್ನದೇ ಆದ ವರದಿ ನೀಡಿದೆ. ಹೀಗಾಗಿ ಬಿಬಿಎಂಪಿ ಕಾಮಗಾರಿಗಳಲ್ಲಿ ನೈಜತೆ ಪರಿಶೀಲನೆ ಮಾಡಿ ಹಣ ಬಿಡುಗಡೆ ಮಾಡಬೇಕು ಎಂಬ ಸಲಹೆ ಬಂದಿವೆ.

ಈ ಬಗ್ಗೆ ತನಿಖೆ ಮಾಡುವಂತೆ ಬಿಜೆಪಿ ಶಾಸಕರು ಸಲಹೆ ನೀಡಿದ್ದಾರೆ. ಅವರ ಸಲಹೆ ಗಮನದಲ್ಲಿಟ್ಟುಕೊಂಡು ವಾಸ್ತವಾಂಶ ಅರಿಯಲು ವರದಿ ಕೇಳಿದ್ದೇನೆ. ಅನೇಕರು ವರ್ಷಾನುಗಟ್ಟಲೆಯಿಂದ ಬಿಲ್​​ಗಾಗಿ ಕಾಯುತ್ತಿದ್ದಾರೆ. ಯಾರು ಕೆಲಸ ಕೊಟ್ಟಿದ್ದಾರೆ? ಯಾವ ಕೆಲಸ ಆಗಿದೆ, ಅದರ ಗುಣಮಟ್ಟ ಏನಿದೆ? ಎಂದು ಪರಿಶೀಲನೆ ಆಗಬೇಕು. ಈ ವರದಿ ಬಂದ ನಂತರ ವಿವರವಾಗಿ ಮಾತನಾಡುವೆ ಎಂದು ಭರವಸೆ ನೀಡಿದರು.

ಇದನ್ನೂಓದಿ:ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅನುದಾನ ಬಿಡುಗಡೆ ಬಗ್ಗೆ ಮಾತುಕತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.