ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಗಣಪತಿ ದೇವಸ್ಥಾನ ನಿರ್ಮಾಣ ಮಾಡುವ ಅನುಮತಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ದೇವಸ್ಥಾನ ನಿರ್ಮಾಣದ ಕಾಮಗಾರಿ ಉಸ್ತುವಾರಿ ಹೊತ್ತಿರುವ ಪಾಲಿಕೆಯ ಇಂಜಿನಿಯರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯಪಾಲರು, ಮುಖ್ಯ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಲು ವಿದ್ಯಾರ್ಥಿಗಳು ಮುಂದಾದರು. ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಮತ್ತು ರಿಜಿಸ್ಟ್ರಾರ್ ಕೂಡ ಈ ನಿರ್ಧಾರವನ್ನು ವಿರೋಧಿಸಿದ್ದಾರೆ. ನಾಗರಿಕ ಸಂಸ್ಥೆಯೊಂದು ದೇವಾಲಯ ನಿರ್ಮಾಣಕ್ಕೆ ಮುಂದಾಗಿದೆ.
ದೇವಸ್ಥಾನ ನಿರ್ಮಿಸುವ ಬದಲು ಗ್ರಂಥಾಲಯ ಅಥವಾ ಇತರ ಸೌಲಭ್ಯ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ತಿಳಿಸಿದರು. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳ ನಡುವೆ ವಾಗ್ವಾದವೂ ನಡೆಯಿತು.
ಇದನ್ನೂ ಓದಿ: ರಸ್ತೆ ಗುಂಡಿ ಸಮೀಪ ಕುಳಿತು ನಿವೃತ್ತ ಸರ್ಕಾರಿ ನೌಕರನಿಂದ ಏಕಾಂಗಿ ಪ್ರತಿಭಟನೆ