ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಶನಿವಾರದವರೆಗೆ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ವಿಭಾಗದ ನಿರ್ದೇಶಕರಾದ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಕರಾವಳಿಯಲ್ಲಿ ಗರಿಷ್ಠ ಉಷ್ಣಾಂಶ 31ರಿಂದ 32 ಡಿಗ್ರಿ ಸೆಂಟಿಗ್ರೇಡ್ ಇದ್ದು, ಕನಿಷ್ಠ ಉಷ್ಣಾಂಶ 21ರಿಂದ 23 ಇದೆ. ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ 31-32, ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 34-35 ಡಿಗ್ರಿ ಸೆಂಟಿಗ್ರೇಡ್ ಇದೆ. ಬೀದರ್ನಲ್ಲಿ ಕನಿಷ್ಠ ಉಷ್ಣಾಂಶ 16, ದಾವಣಗೆರೆಯಲ್ಲಿ 13, ಬೆಳಗಾವಿ 15, ಬೆಂಗಳೂರು 14 ಡಿಗ್ರಿ ಸೆಂಟಿಗ್ರೇಡ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದರು.
ಇನ್ನು ಕರಾವಳಿಯಲ್ಲಿ ಫೆ. 17 ರಿಂದ ಫೆ. 20ರವರೆಗೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಫೆ. 17 ಹಾಗೂ 21ರಂದು ಒಣಹವೆ ಮುಂದುವರೆಯುವ ಸಾಧ್ಯತೆ ಇದ್ದು, ಫೆ. 18ರಿಂದ 20ರವರೆಗೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನಲ್ಲಿ ಫೆ. 17 ರಿಂದ ಫೆ. 21ರವರೆಗೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಂಟಿಗ್ರೇಡ್ ಹಾಗೂ ಗಷ್ಠ 31 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ ಎಂದರು.